ಬೆಂಗಳೂರು: ತೆರಿಗೆ ವಂಚನೆ ಆರೋಪ, ಪೋಥಿಸ್ ಬಟ್ಟೆ ಶೋ ರೂಮ್​ಗಳ​​ ಮೇಲೆ ಐಟಿ ದಾಳಿ

Updated on: Sep 12, 2025 | 10:12 AM

ಆದಾಯ ತೆರಿಗೆ ವಂಚನೆ ಆರೋಪದಲ್ಲಿ ತಮಿಳುನಾಡು ಮೂಲದ ಪೋಥಿಸ್​ನ ಬೆಂಗಳೂರಿನ ಬಟ್ಟೆ ಮಳಿಗೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಸುಮಾರು 30 ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಐಟಿ ದಾಳಿಯ ವಿಡಿಯೋ ಇಲ್ಲಿದೆ.

ಬೆಂಗಳೂರು, ಸೆಪ್ಟೆಂಬರ್ 12: ಬೆಂಗಳೂರಿನಲ್ಲಿ ಪೋಥಿಸ್ ಬಟ್ಟೆ ಶೋ ರೂಮ್​​ ಮೇಲೆ ಶುಕ್ರವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. ಮೈಸೂರು ರಸ್ತೆಯ ಟೆಂಬರ್ ಲೇಔಟ್​ನಲ್ಲಿರುವ ಪೋಥಿಸ್​ ಶೋ ರೂಮ್​ಗೆ 25ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದೆ. ಗಾಂಧಿನಗರದಲ್ಲಿರುವ ಪೋಥಿಸ್​ ಶೋ ರೂಮ್ ಮೇಲೂ ದಾಳಿ ನಡೆದಿದೆ. ಪೋಥಿಸ್ ಮಳಿಗೆ ತಮಿಳುನಾಡು ಮೂಲದ ಉದ್ಯಮಿಗೆ ಸೇರಿದ್ದಾಗಿದ್ದು, ಹೀಗಾಗಿ ಚೆನ್ನೈಯಿಂದಲೇ ಐಟಿ ಅಧಿಕಾರಿಗಳು ಬಂದಿದ್ದಾರೆ. ಆದಾಯ ತೆರಿಗೆ ವಂಚನೆ ಆರೋಪ ಹಿನ್ನೆಲೆ ದಾಳಿ ನಡೆದಿದೆ. ಕೆಲವೇ ವರ್ಷಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆದಿದ್ದ ಪೋಥಿಸ್ ಬಟ್ಟೆ ಮಳಿಗೆಯ ಶೋ ರೂಮ್​ಗಳು ಬೆಂಗಳೂರು, ತಮಿಳುನಾಡು ಸೇರಿ ಹಲವು ಕಡೆ ಇವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 12, 2025 10:10 AM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More