ದ್ವಿಚಕ್ರ ವಾಹನಕ್ಕೆ ಗುದ್ದಿ ಎಳೆದೊಯ್ದ ಕಾರು: ಚಾಲಕ ನಾಪತ್ತೆ; ಮಹಿಳೆ ಸ್ಥಿತಿ ಗಂಭೀರ
ಬೆಂಗಳೂರಿನ ಜಯಮಹಲ್‌ನಲ್ಲಿ ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸುಮಾರು ಐದಮೀಟರ್‌ಗಳಷ್ಟು ಎಳೆದು ಹೋಗಿರುವ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಬೈಕ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋವಾ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಬೆಂಗಳೂರು, ಮಾರ್ಚ್ 08: ಜಯಮಹಲ್ ಬಳಿ ಹಿಟ್ ಆ್ಯಂಡ್ ರನ್ ಪ್ರಕರಣವೊಂದು ನಡೆದಿದೆ. ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಸುಮಾರು ನಾಲ್ಕರಿಂದ ಐದು ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದೆ. ಈ ಭೀಕರ ಅಪಘಾತದ ಪರಿಣಾಮವಾಗಿ ಬೈಕ್‌ನಲ್ಲಿ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ಕೂಡಲೇ ಇನ್ನೋವಾ ಚಾಲಕ ಮತ್ತು ಕಾರಿನಲ್ಲಿದ್ದ ಇತರರು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಾರಿಯಾದ ಚಾಲಕನ ಪತ್ತೆಗಾಗಿ ತೀವ್ರ ಶೋಧ ಮುಂದುವರಿದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಧಾರಾಕಾರ ಮಳೆಗೆ ವೈಟ್ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ

