ದ್ವಿಚಕ್ರ ವಾಹನಕ್ಕೆ ಗುದ್ದಿ ಎಳೆದೊಯ್ದ ಕಾರು: ಚಾಲಕ ನಾಪತ್ತೆ; ಮಹಿಳೆ ಸ್ಥಿತಿ ಗಂಭೀರ

Edited By:

Updated on: Mar 08, 2026 | 2:23 PM

ಬೆಂಗಳೂರಿನ ಜಯಮಹಲ್‌ನಲ್ಲಿ ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸುಮಾರು ಐದಮೀಟರ್‌ಗಳಷ್ಟು ಎಳೆದು ಹೋಗಿರುವ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಬೈಕ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋವಾ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಬೆಂಗಳೂರು, ಮಾರ್ಚ್​​ 08: ಜಯಮಹಲ್‌ ಬಳಿ  ಹಿಟ್ ಆ್ಯಂಡ್​ ರನ್ ಪ್ರಕರಣವೊಂದು ನಡೆದಿದೆ. ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಸುಮಾರು ನಾಲ್ಕರಿಂದ ಐದು ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದೆ. ಈ ಭೀಕರ ಅಪಘಾತದ ಪರಿಣಾಮವಾಗಿ ಬೈಕ್‌ನಲ್ಲಿ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬೈಕ್​​ನಲ್ಲಿ ಸಂಚರಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ಕೂಡಲೇ ಇನ್ನೋವಾ ಚಾಲಕ ಮತ್ತು ಕಾರಿನಲ್ಲಿದ್ದ ಇತರರು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಾರಿಯಾದ ಚಾಲಕನ ಪತ್ತೆಗಾಗಿ ತೀವ್ರ ಶೋಧ ಮುಂದುವರಿದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More