ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ವೈಭವಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತರು

Updated on: Apr 02, 2026 | 6:51 AM

ಐತಿಹಾಸಿಕ ಬೆಂಗಳೂರು ಕರಗ ಬುಧವಾರ ತಡರಾತ್ರಿ ಸಂಭ್ರಮದಿಂದ ನೆರವೇರಿತು. ಲಕ್ಷಾಂತರ ಮಂದಿ ಭಕ್ತರು ದ್ರೌಪದಮ್ಮನ ಕರಗ ಶಕ್ತ್ಯೋತ್ಸವ ದರ್ಶನ ಪಡೆದರು. ಖಡ್ಗ ಹಿಡಿದು ವೀರಕುಮಾರರ ಅಬ್ಬರ, ‘ಗೋವಿಂದ’ ನಾಮಸ್ಮರಣೆ ಎಲ್ಲೆಲ್ಲೂ ಮೊಳಗಿತು. ಬೆಂಗಳೂರು ಕರಗ ಶಕ್ತ್ಯೋತ್ಸವದ ಸಂಭ್ರಮದ ಕ್ಷಣಗಳ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಏಪ್ರಿಲ್ 2: ಬೆಂಗಳೂರು ನಗರದ ಐತಿಹಾಸಿಕ ಮತ್ತು ಸಾಂಪ್ರದಾಯಿಕ ಉತ್ಸವವಾದ ಬೆಂಗಳೂರು ಕರಗ ಭಕ್ತಿಭಾವ ಹಾಗೂ ವೈಭವದಿಂದ ಬುಧವಾರ ರಾತ್ರಿ ನೆರವೇರಿತು. ಕಣ್ಣು ಹಾಯಿಸಿದಷ್ಟು ಭಕ್ತಸಾಗರ ಕಂಡುಬಂದಿದ್ದು, ಎಲ್ಲೆಡೆ “ಗೋವಿಂದ ಗೋವಿಂದ” ಎಂಬ ನಾಮಸ್ಮರಣೆಯೊಂದಿಗೆ ಭಕ್ತರು ಹರ್ಷೋದ್ಘಾರ ಮಾಡಿದರು. ಮಲ್ಲಿಗೆ ಹೂಗಳಿಂದ ಅಲಂಕೃತಗೊಂಡ ದ್ರೌಪದಮ್ಮನ ಕರಗ ಭಕ್ತಿಯ ಕೇಂದ್ರಬಿಂದುವಾಗಿದ್ದು, ಖಡ್ಗ ಹಿಡಿದ ವೀರಕುಮಾರರ ಅಬ್ಬರ ಮಧ್ಯೆ ಕರಗ ಮೆರವಣಿಗೆ ರಾತ್ರಿಯಿಡೀ ಸಂಭ್ರಮ ಸಡಗರದಿಂದ ಸಾಗಿತು. ನಗರದ ವಿವಿಧ ಭಾಗಗಳಲ್ಲಿ ನಡೆದ ರಥಗಳ ಮೆರವಣಿಗೆಯ ವೈಭವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.

ಈ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಗರುಡಾಚಾರ್, ಎನ್.ಎ. ಹ್ಯಾರಿಸ್ ಸೇರಿದಂತೆ ಹಲವರು ಕರಗದ ದರ್ಶನ ಪಡೆದು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More