AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ

ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ

ಗಂಗಾಧರ​ ಬ. ಸಾಬೋಜಿ
|

Updated on: May 24, 2026 | 2:37 PM

Share

ವರ್ತೂರಿನ ಕರ್ನಾಟಕ ಬ್ಯಾಂಕ್‌ನಲ್ಲಿ ಚಿನ್ನ ಮೌಲ್ಯಮಾಪಕ ರವಿಕುಮಾರ್ ನಕಲಿ ಚಿನ್ನ ಬಳಸಿಕೊಂಡು 16.53 ಲಕ್ಷ ರೂ. ವಂಚನೆ ಮಾಡಿದ್ದಾರೆ. ನಕಲಿ ಗ್ರಾಹಕರೊಂದಿಗೆ ಸೇರಿ, ಬ್ಯಾಂಕಿಗೆ ಮಹಾಮೋಸ ಮಾಡಿದ ಈತ, ನಕಲಿ ಚಿನ್ನವನ್ನು ಅಸಲಿ ಎಂದು ಪ್ರಮಾಣೀಕರಿಸುತ್ತಿದ್ದ. ಈ ಪ್ರಕರಣದಲ್ಲಿ ರವಿಕುಮಾರ್ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು, ಮೇ 24: ನಗರದ ವರ್ತೂರಿನಲ್ಲಿರುವ ಕರ್ನಾಟಕ ಬ್ಯಾಂಕ್‌ನಲ್ಲಿ 16.53 ಲಕ್ಷ ರೂ ಮೊತ್ತದ ನಕಲಿ ಚಿನ್ನ ಅಡಮಾನ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಂಕ್‌ನ ಚಿನ್ನ ಮೌಲ್ಯಮಾಪಕ ರವಿಕುಮಾರ್ ಈ ವಂಚನೆಯ ಸೂತ್ರಧಾರಿಯಾಗಿದ್ದು, ನಾಲ್ವರ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಕುಮಾರ್ ಹಲವು ನಕಲಿ ಗ್ರಾಹಕರೊಂದಿಗೆ ಸೇರಿಕೊಂಡು ನಕಲಿ ಚಿನ್ನವನ್ನು ಅಸಲಿ ಚಿನ್ನ ಎಂದು ಹೇಳಿ ಬ್ಯಾಂಕ್‌ಗೆ ವಂಚಿಸಿದ್ದಾನೆ. ಚಿನ್ನ ಮೌಲ್ಯಮಾಪಕ ರವಿಕುಮಾರ್ ಬ್ಯಾಂಕ್‌ಗೆ ಸಲ್ಲಿಸಿದ ನಕಲಿ ಚಿನ್ನವನ್ನು ಅಡಮಾನವಾಗಿ ಇಟ್ಟು, ನಕಲಿ ಗ್ರಾಹಕರಿಗೆ ಸಾಲ ನೀಡುವಂತೆ ಮಾಡಿದ್ದಾನೆ. ಈ ಮೂಲಕ ಬ್ಯಾಂಕ್‌ಗೆ ಮೋಸ ಮಾಡಿದ್ದಾನೆ. ಈತನ ಮೇಲೆ ಅನುಮಾನ ಬಂದು ಪರಿಶೀಲಿಸಿದಾಗ ನಕಲಿ ಚಿನ್ನದ ಕಳ್ಳಾಟ ಬಯಲಾಗಿದೆ. ಸದ್ಯ ಪೊಲೀಸರು ರವಿಕುಮಾರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವರದಿ: ವಿಕಾಸ್​​ ಕ್ರೈಂ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More