ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಎರಡೆರೆಡು ಅಪಘಾತ: ವಿಮಾನಕ್ಕೆ ಟಿಟಿ, ರನ್ ವೇನಲ್ಲಿರುವ ಕಂಬಕ್ಕೆ ಕಾರು ಡಿಕ್ಕಿ

Edited By:

Updated on: Apr 20, 2025 | 8:44 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದು ಸರಣಿ ಅಪಘಾತಗಳು ಸಂಭವಿಸಿವೆ. ಮೊದಲು ಒಂದು ವಿಮಾನಕ್ಕೆ ಟಿಟಿ ವಾಹನವೊಂದು ಡಿಕ್ಕಿ ಹೊಡೆದಿದ್ದರೆ, ಬಳಿಕ ರನ್‌ವೇಯಲ್ಲಿ ಚಲಿಸುತ್ತಿದ್ದ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ದೇವನಹಳ್ಳಿ, ಏಪ್ರಿಲ್​ 20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ (Kempegowda Airport) ಇಂದು ಬೆಳಿಗ್ಗೆ ಎರಡು ಅಪಘಾತಗಳು ಸಂಭವಿಸಿದೆ. ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದರೆ, ಬಳಿಕ ರನ್ ವೇನಲ್ಲಿರುವ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದಿರುವಂತಹ ಘಟನೆ ನಡೆದಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More