ಬೆಂಗಳೂರು ವಿಮಾನ ನಿಲ್ದಾಣದಿಂದ ಇಂದೂ ಇಲ್ಲ ಇಂಡಿಗೋ ಫ್ಲೈಟ್: 5ನೇ ದಿನವೂ ಮುಂದುವರಿದ ಪ್ರಯಾಣಿಕರ ಪರದಾಟ

Edited By:

Updated on: Dec 06, 2025 | 8:44 AM

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಗಳ ಹಾರಾಟ ಸತತ ಐದನೇ ದಿನವೂ ರದ್ದಾಗಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರೀಫಂಡ್ ಮತ್ತು ಮರು ವೇಳಾಪಟ್ಟಿಗಾಗಿ ಇಂಡಿಗೋ ಕೌಂಟರ್‌ಗಳ ಮುಂದೆ ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಪರದಾಟ ಮುಂದುವರಿಸಿದ್ದಾರೆ. ಡಿಜಿಸಿಎ ಸಭೆಯ ನಂತರವೂ ಪರಿಸ್ಥಿತಿ ಸುಧಾರಿಸಿಲ್ಲ.

ಬೆಂಗಳೂರು, ಡಿಸೆಂಬರ್ 6: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಗಳ ಹಾರಾಟ ಸತತ ಐದನೇ ದಿನವೂ ರದ್ದಾಗಿರುವುದರಿಂದ ಪ್ರಯಾಣಿಕರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ. ನಿರಂತರವಾಗಿ ವಿಮಾನಗಳು ರದ್ದಾಗುತ್ತಿರುವುದು ಬೆಳಂಬೆಳಗ್ಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಡಿಪಾರ್ಚರ್ ಗೇಟ್ ಮತ್ತು ಇಂಡಿಗೋ ಕೌಂಟರ್‌ಗಳ ಬಳಿ ಪ್ರಯಾಣಿಕರು ಉದ್ದನೆಯ ಸರದಿ ಸಾಲಿನಲ್ಲಿ ನಿಂತಿದ್ದಾರೆ. ಈಗಾಗಲೇ ಟಿಕೆಟ್ ಕಾಯ್ದಿರಿಸಿದವರು ವಿಮಾನಗಳು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದರೆ, ರದ್ದಾದ ವಿಮಾನಗಳಿಗೆ ರೀಫಂಡ್ ಅಥವಾ ಮರು ವೇಳಾಪಟ್ಟಿ ಪಡೆಯಲು ಕಷ್ಟಪಡುತ್ತಿದ್ದಾರೆ. ಶುಕ್ರವಾರ ಡಿಜಿಸಿಎ ಸಭೆ ನಡೆಸಿ ಒಂದಷ್ಟು ಮಾರ್ಗಸೂಚಿ ಬಿಡುಗಡೆ ಮಾಡಿದ ನಂತರ ವಿಮಾನಗಳು ಸರಿಯಾಗಬಹುದೆಂಬ ನಿರೀಕ್ಷೆ ಇದ್ದುದು ಈಗ ಹುಸಿಯಾಗಿದೆ. ಲಗೇಜ್ ಸಮೇತ ಬಂದ ಅನೇಕ ಪ್ರಯಾಣಿಕರು ನೆಲದ ಮೇಲೆ ಮಲಗಿ ವಿಶ್ರಾಂತಿ ಪಡೆಯುತ್ತಿರುವುದು ಕಂಡುಬಂದಿದೆ. ಒಟ್ಟಾರೆಯಾಗಿ, ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಪರದಾಟ ಮುಂದುವರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More