ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ ರಿಕ್ಕಿ?
ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ನಡೆದ ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಡ್ರಿಫ್ಟಿಂಗ್ ಮಾಡಲಾಗಿದೆಯೇ ಎಂಬ ಅನುಮಾನಗಳಿದ್ದು, ಕಬ್ಬನ್‌ಪಾರ್ಕ್ ಸಂಚಾರ ಪೊಲೀಸರು ಕೆಎ 05 ಎನ್ಆರ್ 0009 ಸಂಖ್ಯೆಯ ಕಾರನ್ನು ಸೀಜ್ ಮಾಡಿದ್ದಾರೆ. ರಿಕ್ಕಿ ರೈ ನಿವಾಸದಲ್ಲಿ ಪತ್ತೆಯಾದ ಕಾರಿಗೆ ಸಂಬಂಧಿಸಿದಂತೆ ಅವರಿಗೆ ನೋಟಿಸ್ ನೀಡಲಾಗಿದೆ.
ಬೆಂಗಳೂರು, ಮಾರ್ಚ್ 22: ನಗರದಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ತನಿಖೆ ವೇಳೆ ರಿಕ್ಕಿ ರೈ ನಿವಾಸದಲ್ಲಿ ಪತ್ತೆಯಾದ ಕೆಎ 05 ಎನ್ಆರ್ 0009 ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಕಬ್ಬನ್‌ಪಾರ್ಕ್ ಸಂಚಾರ ಪೊಲೀಸರು ಸೀಜ್ ಮಾಡಿದ್ದಾರೆ. ಕಾರು ದಾಖಲೆಗಳ ಪರಿಶೀಲನೆ ನಡೆಸಿದಾಗ ಮಾಲೀಕತ್ವದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ನೋಂದಣಿ ದಾಖಲೆಗಳು ಸರಿಯಿಲ್ಲದ ಕಾರಣ ಪೊಲೀಸರು ಆರ್‌ಟಿಒಗೆ ಪತ್ರ ಬರೆದಿದ್ದಾರೆ. ಅಲ್ಲದೆ, ರಿಕ್ಕಿ ರೈ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಚಾಲಕನ ಗುರುತು ಪತ್ತೆ ಹಚ್ಚುವ ಪ್ರಯತ್ನ ನಡೆಸಲಾಗುತ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 22, 2026 12:27 PM
Loading...
Unable to load recommendations.
Follow Us
