ಮತಾಂತರಕ್ಕೆ ಒಪ್ಪದಿದ್ದಕ್ಕೆ ಪ್ರಿಯತಮೆಗೆ ಕೈಕೊಟ್ಟಿದ್ದ ಆರೋಪಿ ಸೆರೆ
ಬೆಂಗಳೂರಿನಲ್ಲಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ ಆರೋಪಿ, ನಂತರ ಮತಾಂತರಕ್ಕೆ ಒತ್ತಾಯಿಸಿದ್ದಾನೆ. ಯುವತಿ ಒಪ್ಪದಿದ್ದಾಗ ಆಕೆಯನ್ನು ಕೈಬಿಟ್ಟು ಬೇರೊಬ್ಬ ಯುವತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ವಿಡಿಯೋ ನೋಡಿ.
ಬೆಂಗಳೂರು, ಅಕ್ಟೋಬರ್ 25: ಲವ್ ಜಿಹಾದ್ (Love Jihad) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಮೊಹಮ್ಮದ್ ಇಶಾಕ್ನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮತಾಂತರಕ್ಕೆ ಒಪ್ಪದಿದ್ದಕ್ಕೆ ಪ್ರಿಯತಮೆಗೆ ಕೈಕೊಟ್ಟಿದ್ದ. ಬೇರೊಬ್ಬ ಯುವತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ್ದ. ಹೆಚ್ಎಸ್ಆರ್ ಲೇಔಟ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಳು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
