AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka LPG Crisis: ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!

Karnataka LPG Crisis: ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!

ಭಾವನಾ ಹೆಗಡೆ
|

Updated on: Apr 01, 2026 | 12:20 PM

Share

ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದ್ದು, ಚಾಲಕರು ಅಭೂತಪೂರ್ವ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಹೆಬ್ಬಾಳದ ಗುಡ್ಡದಹಳ್ಳಿ ವೃತ್ತ ಮತ್ತು ನವರಂಗ್ ಸೇರಿದಂತೆ ವಿವಿಧ ಎಲ್‌ಪಿಜಿ ಬಂಕ್‌ಗಳಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ಸರತಿ ಸಾಲುಗಳು ಕಂಡುಬರುತ್ತಿವೆ. ಬೆಳಗ್ಗಿನ ಜಾವ 4-6 ಗಂಟೆಗಳಿಂದಲೇ ಚಾಲಕರು ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ.

ಬೆಂಗಳೂರು, ಏಪ್ರಿಲ್ 01: ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದ್ದು, ಚಾಲಕರು ಅಭೂತಪೂರ್ವ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಹೆಬ್ಬಾಳದ ಗುಡ್ಡದಹಳ್ಳಿ ವೃತ್ತ ಮತ್ತು ನವರಂಗ್ ಸೇರಿದಂತೆ ವಿವಿಧ ಎಲ್‌ಪಿಜಿ ಬಂಕ್‌ಗಳಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ಸರತಿ ಸಾಲುಗಳು ಕಂಡುಬರುತ್ತಿವೆ. ಬೆಳಗ್ಗಿನ ಜಾವ 4-6 ಗಂಟೆಗಳಿಂದಲೇ ಚಾಲಕರು ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ.

ಅನೇಕ ಗ್ಯಾಸ್ ಏಜೆನ್ಸಿಗಳು ಸ್ಟಾಕ್ ಇಲ್ಲ ಎನ್ನುತ್ತಿದ್ದರೆ ಲಭ್ಯವಿರುವ ಕೆಲವು ಬಂಕ್‌ಗಳಲ್ಲೂ, ಪೂರ್ಣ ಟ್ಯಾಂಕ್ ಬದಲಾಗಿ ಪ್ರತಿ ಆಟೋಗೆ 400 ರೂ. ಮೌಲ್ಯದ ಸೀಮಿತ ಪ್ರಮಾಣದ ಗ್ಯಾಸ್ ಮಾತ್ರ ತುಂಬಲಾಗುತ್ತಿದೆ. ಒಂದು ವಾರದ ಸ್ಟಾಕ್ ಕೇವಲ ಒಂದು ದಿನದಲ್ಲಿ ಖಾಲಿಯಾಗುತ್ತಿದೆ ಎಂದು ಬಂಕ್ ಮಾಲೀಕರು ಹೇಳಿದ್ದಾರೆ. ಇದರಿಂದಾಗಿ ಆಟೋ ಚಾಲಕರು ದಿನದ ದುಡಿಮೆಯನ್ನು ಕಳೆದುಕೊಳ್ಳುತ್ತಿದ್ದು, ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us