ಬೆಂಗಳೂರು: ಕಗ್ಗದಾಸಪುರದಲ್ಲಿ 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ

Edited By:

Updated on: Sep 30, 2026 | 2:25 PM

ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ ಗ್ಯಾಸ್ ರೀಫಿಲ್ಲಿಂಗ್ ವೇಳೆ ನಾಲ್ಕು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಒಂದು ಸಿಲಿಂಡರ್ ಹಾರಿ ಸಮೀಪದ ಶಾಲೆಯ ಕಿಟಕಿಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿದ್ದು, ತನಿಖೆ ನಡೆಯುತ್ತಿದೆ.

ಬೆಂಗಳೂರು, ಸೆಪ್ಟೆಂಬರ್ 30: ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದೆ. ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ರೀಫಿಲ್ಲಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಸರಣಿಯಾಗಿ ನಾಲ್ಕು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಒಂದು ಸಿಲಿಂಡರ್ ಹಾರಿ ಸಮೀಪದ ಶಾಲೆಯ ಕಿಟಕಿಗೆ ಅಪ್ಪಳಿಸಿದೆ. ಈ ಘಟನೆ ಅಟಲ್ ಬಿಹಾರಿ ವಾಜಪೇಯಿ ಪಾರ್ಕ್ ಬಳಿ, ಕಗ್ಗದಾಸಪುರದಲ್ಲಿ ಸಂಭವಿಸಿದೆ. ಸ್ಫೋಟದ ತಕ್ಷಣವೇ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಘಟನೆಯ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ, ಅಗ್ನಿಶಾಮಕ ದಳದವರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಅದೃಷ್ಟವಶಾತ್, ಈ ದುರ್ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಅಥವಾ ಗಂಭೀರ ಗಾಯಗಳಾಗಿಲ್ಲ. ಸ್ಥಳದಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ನಡೆಯುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More