ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ತಪ್ಪಿದ ಅನಾಹುತ

Edited By:

Updated on: Sep 07, 2026 | 7:07 AM

ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾನುವಾರ ರಾತ್ರಿ ಬೆಂಕಿ ಅನಾಹುತ ಸಂಭವಿಸಿದೆ. ನಿಲ್ದಾಣದ ಪ್ಲಾಟ್‌ಫಾರ್ಮ್ 1ರ ಬಳಿ ನಿಂತಿದ್ದ ಹಳೆಯ ಖಾಲಿ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡು ಬೋಗಿ ಭಾಗಶಃ ಸುಟ್ಟುಹೋಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತವಾಗಲೀ, ಯಾವುದೇ ಪ್ರಾಣಹಾನಿಯಾಗಲೀ ಸಂಭವಿಸಿಲ್ಲ.

ಬೆಂಗಳೂರು, ಸೆಪ್ಟೆಂಬರ್ 7: ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ 1ರ ಬಳಿ ಖಾಲಿಯಾಗಿ ನಿಂತಿದ್ದ ಹಳೆಯ ರೈಲು ಬೋಗಿಯಲ್ಲಿ ಭಾನುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ರೈಲು ಬೋಗಿ ಭಾಗಶಃ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 07, 2026 06:59 AM
Loading...
Unable to load recommendations.
Follow Us
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More