Mahashivratri 2023: ಬಗೆ ಬಗೆಯ ಹೂವುಗಳಿಂದ ಅಲಂಕೃತಗೊಂಡ ಕಾಡು ಮಲ್ಲೇಶ್ವರ; ನೀವು ದರ್ಶನ ಮಾಡಿ
Mahashivratri: ಮಾಹಾಶಿವರಾತ್ರಿ ನಿಮಿತ್ತ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಇತಿಹಾಸ ಪ್ರಸಿದ್ಧ ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಿದ್ದಾರೆ. ಶಿವನಿಗೆ ವಿಶೇಷ ಅಲಂಕಾರ ಮಾಡಿದ್ದು, ಭಕ್ತರು ಪರಮಾತ್ಮನನ್ನು ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಮಾಹಾಶಿವರಾತ್ರಿ ನಿಮಿತ್ತ ಬೆಂಗಳೂರಿನ (Bengaluru) ಮಲ್ಲೇಶ್ವರಂನಲ್ಲಿರುವ ಇತಿಹಾಸ ಪ್ರಸಿದ್ಧ ಕಾಡುಮಲ್ಲೇಶ್ವರ (Kadu Malleshwar) ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಿದ್ದಾರೆ. ದೇವಸ್ಥಾನವನ್ನು ಸಂಪೂರ್ಣ ಹೂವಿನಿಂದ ಅಲಂಕಾರ ಮಾಡಿದ್ದಾರೆ. ಇನ್ನು ಶಿವನಿಗೆ ವಿಶೇಷ ಅಲಂಕಾರ ಮಾಡಿದ್ದು, ಭಕ್ತರು ಪರಮಾತ್ಮನನ್ನು ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಭಕ್ತರ ದಂಡೇ ದೇವಸ್ಥಾನಕ್ಕೆ ಹರಿದು ಬರುತ್ತಿದೆ. ನಸುಕಿನ ಜಾವದಿಂದ ದರ್ಶನಕ್ಕೆ ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿರುವುದನ್ನು ಕಾಣಬಹುದಾಗಿದೆ.
Published on: Feb 18, 2023 08:56 AM