ಪತ್ನಿ ಜತೆಗಿನ ಲೈಂಗಿಕ ಕ್ರಿಯೆ ವಿಡಿಯೋ ಸ್ನೇಹಿತರಿಗೆ ಶೇರ್: ಸಂತ್ರಸ್ತೆ ಹೇಳೋದೇನು?
ಮನೆಯ ಬೆಡ್ ರೂಂನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಪತ್ನಿ ಜತೆಗಿನ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಸೈಯದ್ ಇನಾಮುಲ್ ಎಂಬಾತನೊಂದಿಗೆ ಬ್ರೋಕರ್ ಮೂಲಕ ಡಿಸೆಂಬರ್ 15ರಂದು ಆಕೆಯ ಮದುವೆ ಆಗಿತ್ತು.
ಬೆಂಗಳೂರು, ಅಕ್ಟೋಬರ್ 03: ಪತ್ನಿ ಜತೆಗಿನ ಲೈಂಗಿಕ ಕ್ರಿಯೆಯನ್ನು ರಹಸ್ಯವಾಗಿ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ (Bengaluru) ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಮಾತನಾಡಿರುವ ಸಂತ್ರಸ್ತೆ, ಮ್ಯಾರೇಜ್ ಬ್ರೋಕರ್ ಮೂಲಕ ಡಿಸೆಂಬರ್ 15ರಂದು ಸೈಯದ್ ಇನಾಮುಲ್ ಜೊತೆ ಮದುವೆ ಆಗಿದ್ದು, ರಿಸೆಪ್ಷನ್ ನಡೆದ ರಾತ್ರಿಯೇ ಆತ ನನಗೆ ತಲಾಖ್ ನೀಡಿದ್ದ. ಅದಾದ ಬಳಿಕ ತನಗೆ ಹೊಡೆದು ಬಡಿದು ಮಾಡುತ್ತಿದ್ದ ಆರೋಪಿ, ಖಾಸಗಿ ವಿಡಿಯೋಗಳನ್ನ ರೆಕಾರ್ಡ್ ಮಾಡಿ ಬೇರೆಯವರಿಗೆ ಕಳುಹಿಸುತ್ತಿದ್ದ ಎಂದು ಆರೋಪಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
