ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ ಹಾಕಿ ಯುವಕ ಪರಾರಿ

Edited By:

Updated on: Nov 21, 2026 | 7:49 AM

ಮದುವೆ ವಿಚಾರಕ್ಕೆ ಬೆಂಗಳೂರಿನ ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಎರಡು ಕುಟುಂಬಗಳ ನಡುವೆ ಭಾರಿ ಜಗಳ ನಡೆದಿದೆ. ಈ ವೇಳೆ ಯುವಕನೊಬ್ಬ ಪಿಸ್ತೂಲ್ ಪ್ರದರ್ಶಿಸಿ ಹುಡುಗಿ ಮನೆಯವರಿಗೆ ಬೆದರಿಕೆ ಹಾಕಿದ್ದಾನೆ. ಸಂಬಂಧಿಕರು ಪಿಸ್ತೂಲ್ ಕಸಿದುಕೊಳ್ಳುತ್ತಿದ್ದಂತೆಯೇ ಯುವಕ ಸ್ನೇಹಿತರೊಂದಿಗೆ ಪರಾರಿಯಾಗಿದ್ದಾನೆ. ಪುಟ್ಟೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು, ನವೆಂಬರ್ 21: ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ ಯುವಕನೊಬ್ಬ ಪಿಸ್ತೂಲ್ ಪ್ರದರ್ಶಿಸಿ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯ ವಿನಾಯಕ ನಗರದಲ್ಲಿ ನಡೆದಿದೆ. ಎರಡು ಕುಟುಂಬಗಳ ನಡುವೆ ಭಾರಿ ಜಗಳ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪುಟ್ಟೇನಹಳ್ಳಿಯ ವಿನಾಯಕ ನಗರದಲ್ಲಿ ಹುಡುಗಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾತುಕತೆ ನಡೆಯುತ್ತಿತ್ತು. ಈ ವೇಳೆ ಮಾತುಕತೆಯು ಜಗಳಕ್ಕೆ ತಿರುಗಿದೆ. ಜಗಳ ತೀವ್ರಗೊಳ್ಳುತ್ತಿದ್ದಂತೆಯೇ, ಯುವಕನೊಬ್ಬ ಪಿಸ್ತೂಲ್ ತೆಗೆದು ಹುಡುಗಿ ಮನೆಯವರಿಗೆ ಬೆದರಿಕೆ ಹಾಕಿದ್ದಾನೆ. ತಕ್ಷಣವೇ ಅಲ್ಲಿದ್ದ ಸಂಬಂಧಿಕರು ಆ ಯುವಕನಿಂದ ಪಿಸ್ತೂಲನ್ನು ಕಸಿದುಕೊಂಡಿದ್ದಾರೆ.

ಪಿಸ್ತೂಲ್ ಕಸಿದುಕೊಳ್ಳುತ್ತಿದ್ದಂತೆಯೇ, ಯುವಕ ಮತ್ತು ಆತನ ಸ್ನೇಹಿತರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾದ ಯುವಕ ಮತ್ತು ಆತನ ಸ್ನೇಹಿತರ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ. ಮದುವೆ ವಿಚಾರಕ್ಕೆ ನಡೆದ ಈ ಜಗಳದಲ್ಲಿ ಗನ್ ಬೆದರಿಕೆ ಪ್ರಕರಣವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More