ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ!

Updated on: Jan 18, 2026 | 2:55 PM

ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತು ಗನ್ ಪ್ರದರ್ಶನ ಮಾಡಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ತಾಳಕೆರೆ ಹ್ಯಾಂಡ್ ಪೋಸ್ಟ್ ಬಳಿ ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಕಾರಿನ ಮಾಲೀಕನನ್ನು ಬಂಧಿಸಲಾಗಿದ್ದು, ವ್ಯಕ್ತಿ ತೋರಿಸಿದ ಗನ್ ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ಪೊಲೀಸರು ಪರಿಶೀಲನೆಗೊಳಪಡಿಸಿದ್ದಾರೆ.

ರಾಮನಗರ, ಜನವರಿ 18: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತು ವ್ಯಕ್ತಿಯೊಬ್ಬ ಗನ್ ಪ್ರದರ್ಶನ ಮಾಡಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ತಾಳಕೆರೆ ಹ್ಯಾಂಡ್ ಪೋಸ್ಟ್ ಬಳಿ ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಕಾರಿನ ಮಾಲೀಕನನ್ನು ಬಂಧಿಸಲಾಗಿದ್ದು, ವ್ಯಕ್ತಿ ತೋರಿಸಿದ ಗನ್ ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ಪೊಲೀಸರು ಪರಿಶೀಲನೆಗೊಳಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More