AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕುಟುಂಬದ 7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು

ಒಂದೇ ಕುಟುಂಬದ 7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು

ಗಂಗಾಧರ​ ಬ. ಸಾಬೋಜಿ
|

Updated on:Nov 06, 2026 | 6:48 PM

Share

ಬೆಂಗಳೂರಿನಲ್ಲಿ ನಡೆದ ಭೀಕರ ಸಾಮೂಹಿಕ ಹತ್ಯಾಕಾಂಡದ ಕುರಿತು ಮನೋವೈದ್ಯ ಡಾ. ಆದಿತ್ಯ ಪಾಂಡುರಂಗಿ ಪ್ರತಿಕ್ರಿಯಿಸಿದ್ದಾರೆ. ಮಾನಸಿಕ ಅಸ್ವಸ್ಥತೆ, ಹೊಂದಾಣಿಕೆ ಸಮಸ್ಯೆಗಳು ಅಥವಾ ವ್ಯಸನಗಳು ಇಂತಹ ಕೃತ್ಯಗಳಿಗೆ ಕಾರಣವಾಗಬಹುದು. ವ್ಯಕ್ತಿಯಲ್ಲಿರುವ ಉದ್ವೇಗ, ಬಾಲ್ಯದ ವರ್ತನೆಗಳು, ಪ್ರತೀಕಾರದ ಪ್ರವೃತ್ತಿ ಮತ್ತು ಮೌಲ್ಯಗಳ ಕೊರತೆ ಪ್ರಮುಖ ಅಂಶಗಳು.

ಬೆಂಗಳೂರು, ನವೆಂಬರ್​​ 06: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ, ಮಹಾ ಹತ್ಯಾಕಾಂಡವೊಂದು ನಡೆದು ಹೋಗಿದೆ. ಹೆಂಡತಿ ಮೇಲಿನ ಕೋಪ, ಅತ್ತೆ ಮನೆಯವರ ಮೇಲಿನ ದ್ವೇಷಕ್ಕೆ ಇಂದುಶೇಖರ್​ ಎಂಬಾತ ಒಂದೇ ಕುಟುಂಬದ ಏಳು ಮಂದಿಯ ಜೀವವನ್ನೇ ಬಲಿಪಡೆದಿದ್ದಾನೆ. ಈ ಘಟನೆಯ ಬಗ್ಗೆ ಮನೋವೈದ್ಯ ಮತ್ತು ಧಾರವಾಡ ಡಿಮ್ಹಾನ್ಸ್ ಪ್ರಾಧ್ಯಾಪಕ ಡಾ. ಆದಿತ್ಯ ಪಾಂಡುರಂಗಿ ಪ್ರತಿಕ್ರಿಯಿಸಿದ್ದು, ‘ಇಂತಹ ಘಟನೆಗಳು ಮಾನಸಿಕ ಕಾಯಿಲೆಗಳಿಂದ ಅಥವಾ ಹೊಂದಾಣಿಕೆ ಸಮಸ್ಯೆಗಳಿಂದ ಉದ್ಭವಿಸಬಹುದು. ಕೆಲವೊಮ್ಮೆ ವ್ಯಸನಗಳು ಸಹ ಇಂತಹ ಕ್ರೂರ ಕೃತ್ಯಗಳಿಗೆ ಪ್ರೇರೇಪಿಸಬಹುದು. ಶೇಖರ್‌ನಂತಹ ವ್ಯಕ್ತಿಗಳು ಬಾಲ್ಯದಿಂದಲೇ ಉದ್ವೇಗದ ಸ್ವಭಾವ ಹೊಂದಿರಬಹುದು ಅಥವಾ ಸಣ್ಣ ಸಮಸ್ಯೆಗಳನ್ನು ದೊಡ್ಡದು ಮಾಡಿಕೊಂಡು ಪ್ರತೀಕಾರ ತೀರಿಸಿಕೊಳ್ಳುವ ಪ್ರವೃತ್ತಿ ಹೊಂದಿರಬಹುದು. ವ್ಯಕ್ತಿಗೆ ಮೌಲ್ಯಗಳನ್ನು ಕಲಿಸುವುದು ಮತ್ತು ಜವಾಬ್ದಾರಿಗಳ ಅರಿವು ಮೂಡಿಸುವುದರಿಂದ ಸಮಾಜದಲ್ಲಿ ಇಂತಹ ಘಟನೆಗಳನ್ನು ತಡೆಯಲು ಸಹಕಾರಿ’ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
​

Published on: Nov 06, 2026 06:11 PM

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More