AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ

ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ

ವಿಕಾಸ್​ ಬಿಎಂ
| Edited By: |

Updated on: Nov 07, 2026 | 8:18 PM

Share

ಮುಖ್ಯಾಂಶಗಳು

  • ಬೆಂಗಳೂರಿನ ರಾಜಾಜಿನಗರದಲ್ಲಿ ಭೀಕರ ಸರಣಿ ಕೊಲೆ ಕೇಸ್
  • ತಮಿಳುನಾಡಿನ ಸೇಲಂ ಎರಕ್ಕಾಡು ಪ್ರದೇಶದಲ್ಲಿ ಎರಡು ಶವಪತ್ತೆ
  • ಇದುವರೆಗೆ ಹತ್ಯೆಯಾಗಿರುವ ಮೂವರು ಮೃತದೇಹಗಳು ಪತ್ತೆ

ಬೆಂಗಳೂರು ಸಾಮೂಹಿಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಲಂನ ಎರಕ್ಕಾಡು ಪ್ರದೇಶದಲ್ಲಿ ಇಂದುಶೇಖರ್ ಪತ್ನಿ ಸುನಿತಾ ಮತ್ತು ಅತ್ತೆ ರೂಪಲತಾ ಅವರ ಮೃತದೇಹಗಳು ಪತ್ತೆಯಾಗಿವೆ. ಈ ಮೊದಲು ನಂದಿಬೆಟ್ಟದ ಬಳಿ ಬಾಲಕ ಪುನೀತ್ ಮೃತದೇಹ ಪತ್ತೆಯಾಗಿತ್ತು. ಇದರೊಂದಿಗೆ ಒಟ್ಟು ಮೂರು ಮೃತದೇಹಗಳು ಪತ್ತೆಯಾದಂತಾಗಿದೆ. ಉಳಿದ ನಾಲ್ಕು ಮೃತದೇಹಗಳಿಗಾಗಿ ಪೊಲೀಸರ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಬೆಂಗಳೂರು, ನವೆಂಬರ್​​ 07: ಬೆಂಗಳೂರಿನ ರಾಜಾಜಿನಗರದಲ್ಲಿ ಭೀಕರ ಸರಣಿ ಕೊಲೆ ಕೇಸ್​​ನಲ್ಲಿ ಪ್ರಮುಖ ಬೆಳೆವಣಿಯೊಂದು ನಡೆದಿದೆ. ತಮಿಳುನಾಡಿನ ಸೇಲಂ ಎರಕ್ಕಾಡು ಪ್ರದೇಶದಲ್ಲಿ ಮತ್ತೆ ಎರಡು ಶವ ಪತ್ತೆ ಆಗಿವೆ. ಇಂದುಶೇಖರ್ ಪತ್ನಿ ಸುನಿತಾ ಮತ್ತು ಅತ್ತೆ ರೂಪವತಿ ಶವ ಎಂದು ಗುರುತಿಸಲಾಗಿದೆ. ಆ ಮೂಲಕ ಇದುವರೆಗೆ ಹತ್ಯೆಯಾಗಿರುವ ಮೂವರು ಮೃತದೇಹಗಳು ಪತ್ತೆ ಆಗಿವೆ. ಇದಕ್ಕೂ ಮೊದಲು, ಬಾಲಕ ಪುನೀತ್‌ನ ಮೃತದೇಹವು ನಂದಿಬೆಟ್ಟದ ತಪ್ಪಲಿನಲ್ಲಿ ಪತ್ತೆಯಾಗಿತ್ತು. ಇನ್ನುಳಿದ ನಾಲ್ಕು ಮೃತದೇಹಕ್ಕಾಗಿ ಪೊಲೀಸರು ಹುಡುಕಾಟ‌ ನಡೆಸಿದ್ದಾರೆ. ಸದ್ಯ ಪತ್ತೆಯಾಗಿರುವ ಮೃತದೇಹಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಕಟ್ಟಿ, ಕೈ ಕಾಲುಗಳನ್ನು ಮುರಿದು ಸೆಲ್ಲೋಟೇಪ್ ಸುತ್ತಿರುವುದು ಬೆಳಕಿಗೆ ಬಂದಿದೆ. ದುರ್ವಾಸನೆ ಬಾರದಂತೆ ರೋಸ್ ವಾಟರ್ ಸಿಂಪಡಿಸಿರುವುದು ಕೂಡಾ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More