AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಏಳು ಜನರ ಭೀಕರ ಹತ್ಯೆ ಪ್ರಕರಣ: ತಂದೆಯ ಕೃತ್ಯಕ್ಕೆ ಮಗಳೂ ಸಾಥ್​​ ನೀಡಿರುವ ಶಂಕೆ

ಬೆಂಗಳೂರಲ್ಲಿ ಏಳು ಜನರ ಭೀಕರ ಹತ್ಯೆ ಪ್ರಕರಣ: ತಂದೆಯ ಕೃತ್ಯಕ್ಕೆ ಮಗಳೂ ಸಾಥ್​​ ನೀಡಿರುವ ಶಂಕೆ

ವಿಕಾಸ್​ ಬಿಎಂ
| Edited By: |

Updated on: Nov 06, 2026 | 11:38 AM

Share

ಬೆಂಗಳೂರಿನಲ್ಲಿ ಒಂದೇ ಕುಟುಂಬದ 7 ಜನರ ಭೀಕರ ಕೊಲೆ ಪ್ರಕರಣದಲ್ಲಿ ಆರೋಪಿ ಇಂದುಶೇಖರ್‌ನ ಪಿಯುಸಿ ಪುತ್ರಿ ಕೂಡ ಸಾಥ್ ನೀಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಆಕೆಯ ಪಾತ್ರದ ಕುರಿತು ತೀವ್ರ ತನಿಖೆ ನಡೆಸುತ್ತಿದ್ದಾರೆ. ಮಗಳ ಮೂಲಕವೇ ಒಬ್ಬೊಬ್ಬರನ್ನೇ ಮನೆಗೆ ಕರೆಸಿಕೊಂಡು ಇಂದುಶೇಖರ್​​ ಕೊಲೆ ಮಾಡಿದ್ದಾನೆ ಎನ್ನಲಾಗಿದ್ದು, 20 ದಿನಗಳಿಂದ ಕೊಲೆ ನಡೆಯುತ್ತಿದ್ದರೂ ಮಗಳು ಮೌನವಾಗಿ ಇದ್ದಿದ್ದೇಕೆ ಎಂಬ ಪ್ರಶ್ನೆ ಉದ್ಭವಿಸಿದೆ.

ಬೆಂಗಳೂರು, ನವೆಂಬರ್​​ 06: ಒಂದೇ ಕುಟುಂಬದ ಏಳು ಜನರ ಭೀಕರ ಹತ್ಯೆ ಪ್ರಕರಣದಲ್ಲಿ ಆರೋಪಿ ಇಂದುಶೇಖರ್​​ಗೆ ಪಿಯುಸಿ ಓದುತ್ತಿರುವ ಮಗಳು ಕೂಡ ಸಾಥ್​​ ನೀಡಿರುವ ಶಂಕೆ ವ್ಯಕ್ತವಾಗಿದೆ. ಮಗಳನ್ನು ಮಾತ್ರ ಬಿಟ್ಟು ಉಳಿದವರೆಲ್ಲರನ್ನೂ ಆರೋಪಿ ಕೊಲೆ ಮಾಡಿದ್ದು, 20 ದಿನಗಳಿಂದ ಕೊಲೆ ನಡೆಯುತ್ತಿದ್ದರೂ ಮಗಳು ಮೌನವಾಗಿದ್ದಳು. ಕಳೆದ 4 ದಿನಗಳಿಂದ ಮನೆ ಬಳಿಯೇ ಓಡಾಟ ನಡೆಸುತ್ತಿದ್ದಳು. ಹೀಗಾಗಿ ತಂದೆಯ ಕೊಲೆ ಕೃತ್ಯಕ್ಕೆ ಆಕೆಯೂ ಸಹಕಾರ ನೀಡಿದ್ದಳಾ? ಇಬ್ಬರೂ ಪ್ಲ್ಯಾನ್​​ ಮಾಡಿ ಕುಟುಂಬವನ್ನೇ ಮುಗಿಸಿದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ. ಅಲ್ಲದೆ ಮಗಳ ಮೂಲಕವೇ ಒಬ್ಬೊಬ್ಬರನ್ನೇ ಮನೆಗೆ ಕರೆಸಿಕೊಂಡು ಇಂದುಶೇಖರ್​​ ಕೊಲೆ ಮಾಡಿರೋದು ಕೂಡ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More