AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!

ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!

ಶಿವಪ್ರಸಾದ್​ ಬಿ.
| Edited By: |

Updated on: Sep 19, 2026 | 7:33 AM

Share

ಬೆಂಗಳೂರಿನ ಸುಧಾಮ ನಗರದಲ್ಲಿ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ಕಂತಸ್ತಿನ ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಟ್ಟಡದ ಕೆಳಭಾಗದಲ್ಲಿದ್ದ ಹೆಲ್ಮೆಟ್ ಮತ್ತು ಮೊಬೈಲ್ ಅಂಗಡಿಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್, ನಿವಾಸಿಗಳನ್ನು ಸಕಾಲದಲ್ಲಿ ಸ್ಥಳಾಂತರಿಸಿದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬೆಂಗಳೂರು, ಸೆಪ್ಟೆಂಬರ್ 19: ಸುಧಾಮ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ರಾತ್ರಿ ಸಂಭವಿಸಿದ ಈ ಘಟನೆಯಲ್ಲಿ, ನಾಲ್ಕಂತಸ್ತಿನ ಕಟ್ಟಡವೊಂದು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅವಘಡ ಸಂಭವಿಸಿದ ಕಟ್ಟಡದ ಕೆಳಮಹಡಿಯಲ್ಲಿ ಹೆಲ್ಮೆಟ್ ಮತ್ತು ಮೊಬೈಲ್ ಅಂಗಡಿಗಳಿದ್ದು, ಅವುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮೇಲಿನ ಮಹಡಿಗಳಲ್ಲಿ ವಾಸಸ್ಥಳಗಳಿದ್ದವು. ಬೆಂಕಿ ಕಾಣಿಸಿಕೊಂಡ ತಕ್ಷಣ, ಕಟ್ಟಡದಲ್ಲಿದ್ದ ನಿವಾಸಿಗಳು ತಮ್ಮ ಜೀವ ಉಳಿಸಿಕೊಳ್ಳಲು ತಕ್ಷಣವೇ ಹೊರಗೋಡಿ ಬಂದಿದ್ದಾರೆ. ಅದೃಷ್ಟವಶಾತ್, ಈ ದೊಡ್ಡ ಮಟ್ಟದ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More