ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!
BSWML ಚಿಕನ್ ಅಂಗಡಿ ತ್ಯಾಜಕ್ಕೆ ಪ್ರತಿ ಕೆಜಿಗೆ 5 ರೂಪಾಯಿ ದರ ನಿಗದಿ ಮಾಡಿದ್ದು, ಇದರ ವಿರುದ್ಧ ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಹೋರಾಟ ಮಾಡಲು ಮುಂದಾಗಿದೆ. ಹೌದು... ಸೆಪ್ಟೆಂಬರ್ 3 ಹಾಗೂ 4 ರಂದು ಬೆಂಗಳೂರಿನ (Bengaluru) ಕೋಳಿ ಮಾಂಸದ ಅಂಗಡಿಗಳು ಬಂದ್ ಆಗಲಿದೆ. ಬೆಂಗಳೂರಿನಲ್ಲಿ ಚಿಕನ್ ಅಂಗಡಿಗಳ ತ್ಯಾಜ್ಯ ವಿಲೇವಾರಿಗೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ಪ್ರತಿ ಕೆಜಿಗೆ 5 ರೂಪಾಯಿ ಶುಲ್ಕ ನಿಗದಿ ಮಾಡಿದೆ. ಈ ಕ್ರಮವನ್ನು ವಿರೋಧಿಸಿ ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಪ್ರತಿಭಟನೆಗೆ (Protest) ಮುಂದಾಗಿದ್ದು, ಅಂಗಡಿ ಬಂದ್ ಮಾಡಿ ಹೋರಾಟಕ್ಕೆ ಇಳಿಯಲಿದ್ದಾರೆ.
ಬೆಂಗಳೂರು (ಸೆಪ್ಟೆಂಬರ್ .01): BSWML ಚಿಕನ್ ಅಂಗಡಿ ತ್ಯಾಜಕ್ಕೆ ಪ್ರತಿ ಕೆಜಿಗೆ 5 ರೂಪಾಯಿ ದರ ನಿಗದಿ ಮಾಡಿದ್ದು, ಇದರ ವಿರುದ್ಧ ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಹೋರಾಟ ಮಾಡಲು ಮುಂದಾಗಿದೆ. ಹೌದು… ಸೆಪ್ಟೆಂಬರ್ 3 ಹಾಗೂ 4 ರಂದು ಬೆಂಗಳೂರಿನ (Bengaluru) ಕೋಳಿ ಮಾಂಸದ ಅಂಗಡಿಗಳು ಬಂದ್ ಆಗಲಿದೆ. ಬೆಂಗಳೂರಿನಲ್ಲಿ ಚಿಕನ್ ಅಂಗಡಿಗಳ ತ್ಯಾಜ್ಯ ವಿಲೇವಾರಿಗೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ಪ್ರತಿ ಕೆಜಿಗೆ 5 ರೂಪಾಯಿ ಶುಲ್ಕ ನಿಗದಿ ಮಾಡಿದೆ. ಈ ಕ್ರಮವನ್ನು ವಿರೋಧಿಸಿ ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಪ್ರತಿಭಟನೆಗೆ (Protest) ಮುಂದಾಗಿದ್ದು, ಅಂಗಡಿ ಬಂದ್ ಮಾಡಿ ಹೋರಾಟಕ್ಕೆ ಇಳಿಯಲಿದ್ದಾರೆ.
ಜಿಬಿಎ ನೂತನ ತ್ಯಾಜ್ಯ ವಿಲೇವಾರಿ ಶುಲ್ಕ ಖಂಡಿಸಿ ಬೃಹತ್ ಪ್ರತಿಭಟನೆಗೆ ಮುಂದಾದ ಪೌಲ್ಟ್ರಿ ಉದ್ಯಮಿಗಳು ಬಂದ್ಗೆ ಕರೆಕೊಟ್ಟಿದ್ದಾರೆ. ಸೆಪ್ಟೆಂಬರ್ 3 ಹಾಗೂ 4 ರಂದು ಬೆಂಗಳೂರಿನಲ್ಲೇ 6 ರಿಂದ 7 ಸಾವಿರ ಚಿಕನ್ ಅಂಗಡಿಗಳು ಕ್ಲೋಸ್ ಮಾಡಲು ನಿರ್ಧರಿಸಿದ್ದು, ಈ ಗುರುವಾರ ಹಾಗೂ ಶುಕ್ರವಾರ ಬೆಂಗಳೂರಿನ ಚಿಕನ್ ಅಂಗಡಿಗಳು ಬಂದ್ ಆಗಲಿದೆ.
