ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಕಬ್ಬಿಣದ ಶೀಟ್: ತಪ್ಪಿದ ಭಾರಿ ದುರಂತ
ಬೆಂಗಳೂರಿನ ಮಾರತ್‌ಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಕಾಮಗಾರಿ ವೇಳೆ ಬೃಹತ್ ಕಬ್ಬಿಣದ ಶೀಟ್ ಏಕಾಏಕಿ ನೆಲಕ್ಕೆ ಬಿದ್ದಿದೆ. ತಡರಾತ್ರಿ ಘಟನೆ ನಡೆದಿದ್ದು, ಭಾರಿ ಅನಾಹುತ ತಪ್ಪಿದೆ. ಶೀಟ್ ಬೀಳುವ ದೃಶ್ಯ ಕಾರೊಂದರ ಡ್ಯಾಶ್‌ಬೋರ್ಡ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯು ನಿರ್ಮಾಣ ಕಾಮಗಾರಿ ಸಂದರ್ಭದ ಸುರಕ್ಷತಾ ಕ್ರಮಗಳ ಬಗ್ಗೆ ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರು, ಆಗಸ್ಟ್ 8: ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಬೃಹತ್ ಕಬ್ಬಿಣದ ಶೀಟ್‌ವೊಂದು ಏಕಾಏಕಿ ನೆಲಕ್ಕೆ ಬಿದ್ದ ಘಟನೆ ನಡೆದಿದೆ. ಮಾರತ್‌ಹಳ್ಳಿ ಮೆಟ್ರೋ ನಿಲ್ದಾಣದ ಸಮೀಪ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಡರಾತ್ರಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ವೇಳೆ ಬೃಹತ್ ಕಬ್ಬಿಣದ ಶೀಟ್ ಕೆಳಗೆ ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಬೈಕ್ ಸವಾರರು ಅಥವಾ ವಾಹನಗಳು ಸಂಚರಿಸುತ್ತಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಕಬ್ಬಿಣದ ಶೀಟ್ ಬೀಳುವ ದೃಶ್ಯ ಕಾರೊಂದರ ಡ್ಯಾಶ್‌ಬೋರ್ಡ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಹಗಲಿನ ವೇಳೆ ಇದೇ ಘಟನೆ ಸಂಭವಿಸಿದ್ದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಹೆಚ್ಚಿತ್ತು. ಈ ಘಟನೆಯಿಂದ ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಶ್ನೆಗಳು ಮೂಡಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

