ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ಕೇಂದ್ರ ಸಚಿವರ ಭೇಟಿ ಬಳಿಕ ತೇಜಸ್ವಿ ಸೂರ್ಯ ಹೇಳಿದ್ದಿಷ್ಟು
ಬೆಂಗಳೂರು ಮೆಟ್ರೋ ದರ ಏರಿಕೆ ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ದರ ಏರಿಕೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು. ದರ ಏರಿಕೆ ಜಾರಿಯಾಗದಂತೆ ಮತ್ತು ಪ್ರಯಾಣಿಕರಿಗೆ ಶಾಶ್ವತ ಪರಿಹಾರ ಸಿಗುವಂತೆ ಹೊಸ ಫೇರ್ ಫಿಕ್ಸೇಷನ್ ಸಮಿತಿ ರಚಿಸುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 05: ಏಕಾಏಕಿ ಮೆಟ್ರೋ ಟಿಕೆಟ್ ದರ ಹೆಚ್ಚಿಸಿ ಬಿಎಂಆರ್‌ಸಿಎಲ್ ಆದೇಶ ಹೊರಡಿಸಿದೆ. ಸೋಮವಾರದಿಂದ ದುಬಾರಿ ಸವಾರಿಗೆ ಸಜ್ಜಾಗಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ಮಾಡಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, ಕೇವಲ 10 ತಿಂಗಳ ಹಿಂದೆಯೇ ಮೆಟ್ರೋ ದರವನ್ನು ಶೇ. 71ರಷ್ಟು ಹೆಚ್ಚಿಸಲಾಗಿತ್ತು. ಈ ಕಾರಣದಿಂದ ಬೆಂಗಳೂರು ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಕುಖ್ಯಾತಿಗೆ ಒಳಗಾಗಿದೆ. ಜನರ ಹಣ ಲೂಟಿ ಮಾಡಲು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್ಗೆ ಚಳಿ ಬಿಡಿಸಿದ ಗ್ರಾಹಕ
