ಮೆಟ್ರೋ ಅನುದಾನ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ನಮ್ಮ ಮೆಟ್ರೋ ಅನುದಾನ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಕೃಷ್ಣ ಬೈರೇಗೌಡ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಮೆಟ್ರೋ ಸಾಲವನ್ನು ಬಿಎಂಆರ್‌ಸಿಎಲ್‌ಗೆ ನೀಡಲಾಗುತ್ತಿದ್ದು, ಅದನ್ನೇ ನಿಗಮ ಮರುಪಾವತಿಸುತ್ತದೆ ಎಂದು ಅವರು ಹೇಳಿದ್ದಾರೆ. ಈ ಸಂಬಂಧ ಅವರು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದು, ಲೈವ್ ವಿಡಿಯೋ ಇಲ್ಲಿದೆ.
ಬೆಂಗಳೂರು, ನವೆಂಬರ್ 12: ನಮ್ಮ ಮೆಟ್ರೋ ಯೋಜನೆಗೆ ಅನುದಾನ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 84 ಶೇಕಡಾ ರಾಜ್ಯ ಸರ್ಕಾರ ಮತ್ತು 16 ಶೇಕಡಾ ಕೇಂದ್ರ ಸರ್ಕಾರ ಅನುದಾನ ನೀಡುತ್ತದೆ ಎಂದು ಸಚಿವರು ಹೇಳುತ್ತಿದ್ದಾರೆ. ಆದರೆ ಇದು ಜನರಿಗೆ ತಪ್ಪು ಮಾಹಿತಿ ನೀಡುವ ಕೆಲಸವಾಗಿದೆ ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ಮೆಟ್ರೋ ಯೋಜನೆಗೆ ಅಂತರರಾಷ್ಟ್ರೀಯ ಬ್ಯಾಂಕ್‌ಗಳಿಂದ ಸಾಲ ದೊರಕಿಸುವಲ್ಲಿ ಕೇಂದ್ರ ಸರ್ಕಾರ ಗ್ಯಾರಂಟಿ ನೀಡುತ್ತದೆ. ಈ ಸಾಲವನ್ನು ರಾಜ್ಯ ಸರ್ಕಾರಕ್ಕೆ ಅಲ್ಲ, ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (BMRCL) ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಪಡೆದ ಸಾಲವನ್ನು ಬಿಎಂಆರ್‌ಸಿಎಲ್‌ವೇ ಮರುಪಾವತಿಸುತ್ತದೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಮೆಟ್ರೋ ಅನುದಾನ ಮತ್ತು ಸಾಲದ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಹಾಗೂ ಸಚಿವರು ರಾಜ್ಯದ ಜನರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ತೇಜಸ್ವಿ ಸೂರ್ಯ, ಈ ಕುರಿತು ರಾಜ್ಯ ಸರ್ಕಾರದ ಹೇಳಿಕೆಗಳನ್ನು ಪ್ರಶ್ನಿಸಿದ್ದಾರೆ. ಮೆಟ್ರೋ ಅನುದಾನದ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿ ಮುಂದುವರಿದಿದೆ. ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

