AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರಿಗೆ ಬಿಗ್ ಗುಡ್‌ನ್ಯೂಸ್: ನಮ್ಮ ಮೆಟ್ರೋ ಪಿಂಕ್ ಲೈನ್ ಎಲಿವೇಟೆಡ್ ಮಾರ್ಗಕ್ಕೆ CMRS ಅನುಮತಿ

ಬೆಂಗಳೂರಿಗರಿಗೆ ಬಿಗ್ ಗುಡ್‌ನ್ಯೂಸ್: ನಮ್ಮ ಮೆಟ್ರೋ ಪಿಂಕ್ ಲೈನ್ ಎಲಿವೇಟೆಡ್ ಮಾರ್ಗಕ್ಕೆ CMRS ಅನುಮತಿ

ಅಕ್ಷಯ್​ ಪಲ್ಲಮಜಲು​​
|

Updated on: Oct 29, 2026 | 5:59 AM

Share

ಬೆಂಗಳೂರು ಮೆಟ್ರೋದ ಪಿಂಕ್ ಲೈನ್ ಗೆ ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸೇಫ್ಟಿ (ಸಿಎಂಆರ್ ಎಸ್) ನಿಂದ ಸುರಕ್ಷತಾ ಅನುಮತಿ ದೊರೆತಿದೆ. ಸಚಿವ ಕೃಷ್ಣ ಬೈರೇಗೌಡರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತ ಸರ್ಕಾರದಿಂದ ಉದ್ಘಾಟನಾ ದಿನಾಂಕ ದೊರೆತ ತಕ್ಷಣ ಸಾರ್ವಜನಿಕ ಸೇವೆಗಳನ್ನು ಪ್ರಾರಂಭಿಸಲು ಮೆಟ್ರೋ ಅಧಿಕಾರಿಗಳು ಸಿದ್ಧರಿದ್ದಾರೆ.

ಬೆಂಗಳೂರು, ಅ,29: ನಮ್ಮ ಮೆಟ್ರೋದ ಮಹತ್ವದ ಪಿಂಕ್ ಲೈನ್ ಗೆ ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸೇಫ್ಟಿ (ಸಿಎಂಆರ್ ಎಸ್) ನಿಂದ ಅನುಮತಿ ದೊರೆತಿದೆ. ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಪಿಂಕ್ ಲೈನ್‌ನ ಎಲಿವೇಟೆಡ್ ಮಾರ್ಗಕ್ಕೆ ಸುರಕ್ಷತಾ ಅನುಮತಿ ದೊರೆತಿರುವುದು ನಮಗೆ ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ. ಸುದೀರ್ಘ ಪ್ರಯತ್ನದ ಬಳಿಕ ಈ ಮಂಜೂರಾತಿ ಸಿಕ್ಕಿದೆ. ಭಾರತ ಸರ್ಕಾರವು ಉದ್ಘಾಟನೆಯ ದಿನಾಂಕವನ್ನು ನೀಡಿದ ತಕ್ಷಣ ಸಾರ್ವಜನಿಕ ಸೇವೆಗಳನ್ನು ಆರಂಭಿಸಲು ನಾವು ಸಿದ್ಧರಾಗಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ದಿನಾಂಕಕ್ಕಾಗಿ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನಮ್ಮ ಮೆಟ್ರೋ ಜಾಲವನ್ನು ವಿಸ್ತರಿಸುವ ಮೂಲಕ ಜನರಿಗೆ ಮತ್ತಷ್ಟು ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಇದೊಂದು ಪ್ರಮುಖ ಹೆಜ್ಜೆಯಾಗಿದೆ. ಎಲಿವೇಟೆಡ್ ಪಿಂಕ್ ಲೈನ್ ಉದ್ಘಾಟನೆಗಾಗಿ ಕಾತರದಿಂದ ಕಾಯುತ್ತಿರುವುದಾಗಿ ಸಚಿವ ಕೃಷ್ಣ ಬೈರೇಗೌಡರು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಅನುಮತಿಯು ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಶಕ್ತಿ ನೀಡಲಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More