ಬೆಂಗಳೂರಿಗರಿಗೆ ಬಿಗ್ ಗುಡ್‌ನ್ಯೂಸ್: ನಮ್ಮ ಮೆಟ್ರೋ ಪಿಂಕ್ ಲೈನ್ ಎಲಿವೇಟೆಡ್ ಮಾರ್ಗಕ್ಕೆ CMRS ಅನುಮತಿ
ಬೆಂಗಳೂರು ಮೆಟ್ರೋದ ಪಿಂಕ್ ಲೈನ್ ಗೆ ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸೇಫ್ಟಿ (ಸಿಎಂಆರ್ ಎಸ್) ನಿಂದ ಸುರಕ್ಷತಾ ಅನುಮತಿ ದೊರೆತಿದೆ. ಸಚಿವ ಕೃಷ್ಣ ಬೈರೇಗೌಡರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತ ಸರ್ಕಾರದಿಂದ ಉದ್ಘಾಟನಾ ದಿನಾಂಕ ದೊರೆತ ತಕ್ಷಣ ಸಾರ್ವಜನಿಕ ಸೇವೆಗಳನ್ನು ಪ್ರಾರಂಭಿಸಲು ಮೆಟ್ರೋ ಅಧಿಕಾರಿಗಳು ಸಿದ್ಧರಿದ್ದಾರೆ.
ಬೆಂಗಳೂರು, ಅ,29: ನಮ್ಮ ಮೆಟ್ರೋದ ಮಹತ್ವದ ಪಿಂಕ್ ಲೈನ್ ಗೆ ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸೇಫ್ಟಿ (ಸಿಎಂಆರ್ ಎಸ್) ನಿಂದ ಅನುಮತಿ ದೊರೆತಿದೆ. ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಪಿಂಕ್ ಲೈನ್‌ನ ಎಲಿವೇಟೆಡ್ ಮಾರ್ಗಕ್ಕೆ ಸುರಕ್ಷತಾ ಅನುಮತಿ ದೊರೆತಿರುವುದು ನಮಗೆ ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ. ಸುದೀರ್ಘ ಪ್ರಯತ್ನದ ಬಳಿಕ ಈ ಮಂಜೂರಾತಿ ಸಿಕ್ಕಿದೆ. ಭಾರತ ಸರ್ಕಾರವು ಉದ್ಘಾಟನೆಯ ದಿನಾಂಕವನ್ನು ನೀಡಿದ ತಕ್ಷಣ ಸಾರ್ವಜನಿಕ ಸೇವೆಗಳನ್ನು ಆರಂಭಿಸಲು ನಾವು ಸಿದ್ಧರಾಗಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ದಿನಾಂಕಕ್ಕಾಗಿ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನಮ್ಮ ಮೆಟ್ರೋ ಜಾಲವನ್ನು ವಿಸ್ತರಿಸುವ ಮೂಲಕ ಜನರಿಗೆ ಮತ್ತಷ್ಟು ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಇದೊಂದು ಪ್ರಮುಖ ಹೆಜ್ಜೆಯಾಗಿದೆ. ಎಲಿವೇಟೆಡ್ ಪಿಂಕ್ ಲೈನ್ ಉದ್ಘಾಟನೆಗಾಗಿ ಕಾತರದಿಂದ ಕಾಯುತ್ತಿರುವುದಾಗಿ ಸಚಿವ ಕೃಷ್ಣ ಬೈರೇಗೌಡರು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಅನುಮತಿಯು ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಶಕ್ತಿ ನೀಡಲಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
