ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್! ಪಿಂಕ್ ಲೈನ್ನಲ್ಲಿ ಮೆಟ್ರೋ ಸಂಚಾರ ಟ್ರಯಲ್ ಆರಂಭ
ನಗರವಾಸಿಗಳಿಗೆ ಮೆಟ್ರೋದಿಂದ ಮತ್ತೊಂದು ಶುಭ ಸುದ್ದಿ ಲಭಿಸಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮಾರ್ಗದಲ್ಲಿ ಮೆಟ್ರೋ ರೈಲು ಓಡಾಟದ ಟ್ರಯಲ್ ಅನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಆರಂಭಿಸಿದೆ. ಒಟ್ಟು 21.26 ಕಿಲೋಮೀಟರ್ ಉದ್ದದ ಈ ಮಾರ್ಗದಲ್ಲಿ ಪ್ರಥಮ ಹಂತವಾಗಿ 7.5 ಕಿ.ಮೀ ಎಲಿವೇಟೆಡ್ ವಿಭಾಗದಲ್ಲಿ ಟ್ರಯಲ್ ನಡೆಯುತ್ತಿದೆ. ಈ ಎಲಿವೇಟೆಡ್ ಮಾರ್ಗದಲ್ಲಿ ಒಟ್ಟು 6 ಸ್ಟೇಷನ್‌ಗಳಿದ್ದು, ಕಾಳೇನಾ ಅಗ್ರಹಾರದಿಂದ ತಾವರೆಕೆರೆ ನಡುವಿನ ಭಾಗದಲ್ಲಿ ಪರೀಕ್ಷಾ ಓಡಾಟ ಆರಂಭವಾಗಿದೆ. ಏಪ್ರಿಲ್–ಮೇ ತಿಂಗಳಲ್ಲಿ ಮೊದಲ ಹಂತದಲ್ಲಿ ಈ ಮಾರ್ಗವನ್ನು ಸಾರ್ವಜನಿಕರಿಗೆ ತೆರೆಯಲು ಬಿಎಂಆರ್ಸಿಎಲ್ ಸಿದ್ಧತೆ ನಡೆಸಿದೆ. ಉಳಿದ 13.76 ಕಿ.ಮೀ ಅಂಡರ್‌ಗ್ರೌಂಡ್ ಕಾಮಗಾರಿ ಪ್ರಗತಿಯಲ್ಲಿದ್ದು, ಅದು ಪೂರ್ಣಗೊಂಡ ಬಳಿಕ ವರ್ಷದ ಅಂತ್ಯಕ್ಕೆ ಸಂಪೂರ್ಣ ಮಾರ್ಗವನ್ನು ಆರಂಭಿಸುವ ಚಿಂತನೆ ಮಾಡಲಾಗಿದೆ.
ಬೆಂಗಳೂರು, ಜನವರಿ 10: ನಗರವಾಸಿಗಳಿಗೆ ಮೆಟ್ರೋದಿಂದ ಮತ್ತೊಂದು ಶುಭ ಸುದ್ದಿ ಲಭಿಸಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮಾರ್ಗದಲ್ಲಿ ಮೆಟ್ರೋ ರೈಲು ಓಡಾಟದ ಟ್ರಯಲ್ ಅನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಆರಂಭಿಸಿದೆ. ಒಟ್ಟು 21.26 ಕಿಲೋಮೀಟರ್ ಉದ್ದದ ಈ ಮಾರ್ಗದಲ್ಲಿ ಪ್ರಥಮ ಹಂತವಾಗಿ 7.5 ಕಿ.ಮೀ ಎಲಿವೇಟೆಡ್ ವಿಭಾಗದಲ್ಲಿ ಟ್ರಯಲ್ ನಡೆಯುತ್ತಿದೆ. ಈ ಎಲಿವೇಟೆಡ್ ಮಾರ್ಗದಲ್ಲಿ ಒಟ್ಟು 6 ಸ್ಟೇಷನ್‌ಗಳಿದ್ದು, ಕಾಳೇನಾ ಅಗ್ರಹಾರದಿಂದ ತಾವರೆಕೆರೆ ನಡುವಿನ ಭಾಗದಲ್ಲಿ ಪರೀಕ್ಷಾ ಓಡಾಟ ಆರಂಭವಾಗಿದೆ. ಏಪ್ರಿಲ್–ಮೇ ತಿಂಗಳಲ್ಲಿ ಮೊದಲ ಹಂತದಲ್ಲಿ ಈ ಮಾರ್ಗವನ್ನು ಸಾರ್ವಜನಿಕರಿಗೆ ತೆರೆಯಲು ಬಿಎಂಆರ್ಸಿಎಲ್ ಸಿದ್ಧತೆ ನಡೆಸಿದೆ. ಉಳಿದ 13.76 ಕಿ.ಮೀ ಅಂಡರ್‌ಗ್ರೌಂಡ್ ಕಾಮಗಾರಿ ಪ್ರಗತಿಯಲ್ಲಿದ್ದು, ಅದು ಪೂರ್ಣಗೊಂಡ ಬಳಿಕ ವರ್ಷದ ಅಂತ್ಯಕ್ಕೆ ಸಂಪೂರ್ಣ ಮಾರ್ಗವನ್ನು ಆರಂಭಿಸುವ ಚಿಂತನೆ ಮಾಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

