AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ: ಅಲ್ಪಕಾಲ ಸಂಚಾರಕ್ಕೆ ಅಡಚಣೆ

ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ: ಅಲ್ಪಕಾಲ ಸಂಚಾರಕ್ಕೆ ಅಡಚಣೆ

ಗಣಪತಿ ಶರ್ಮಾ
|

Updated on: Oct 13, 2026 | 7:13 AM

Share

ಬೆಂಗಳೂರಿನ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಮೆಟ್ರೋ ಹಳಿಗೆ ಜಿಗಿದ ಕಾರಣ ಮೆಟ್ರೋ ಸೇವೆಗಳಿಗೆ ಅಡಚಣೆಯಾದ ಘಟನೆ ನಡೆದಿದೆ. ಸೋಮವಾರ ರಾತ್ರಿ 8:15 ರಿಂದ 8:30ರವರೆಗೆ ಸುಮಾರು 15 ನಿಮಿಷಗಳ ಕಾಲ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಘಟನೆ ಬಳಿಕ ಮೆಟ್ರೋ ಸಿಬ್ಬಂದಿ ಆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರು, ಅಕ್ಟೋಬರ್ 13: ಬೆಂಗಳೂರಿನ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಮೆಟ್ರೋ ರೈಲು ಹಳಿಗೆ ಜಿಗಿದ ಕಾರಣಕ್ಕೆ ಸೋಮವಾರ ರಾತ್ರಿ ಮೆಟ್ರೋ ಸೇವೆಗಳಿಗೆ ಅಡಚಣೆಯಾಗಿತ್ತು. ಘಟನೆ ರಾತ್ರಿ 8:15 ರಿಂದ 8:30ರವರೆಗೆ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲು ಕಾರಣವಾಯಿತು. ವ್ಯಕ್ತಿಯು ಹಳಿಗೆ ಜಿಗಿದಿರುವುದನ್ನು ಗಮನಿಸಿದ ನಂತರ, ಮೆಟ್ರೋ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾಗಿ ಸಂಚಾರವನ್ನು ಸ್ಥಗಿತಗೊಳಿಸಿದರು. ಸೇವೆಗಳು ಅಲ್ಪಾವಧಿಗೆ ಸ್ಥಗಿತಗೊಂಡ ನಂತರ ಮೆಟ್ರೋ ರೈಲು ಸಂಚಾರವನ್ನು ಪುನರಾರಂಭಿಸಲಾಯಿತು.

ಹಳಿಗೆ ಜಿಗಿದ ವ್ಯಕ್ತಿಯನ್ನು ಮೆಟ್ರೋ ಸಿಬ್ಬಂದಿ ತಕ್ಷಣವೇ ವಶಕ್ಕೆ ಪಡೆದಿದ್ದು, ಘಟನೆಗೆ ಕಾರಣವೇನು ಎಂಬ ಕುರಿತು ವಿಚಾರಣೆ ನಡೆಸಲಾಗುತ್ತಿದೆ. ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದು, ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಈ ಘಟನೆಯಿಂದಾಗಿ ಮೆಟ್ರೋ ಪ್ರಯಾಣಿಕರಿಗೆ ತಾತ್ಕಾಲಿಕವಾಗಿ ಅನನುಕೂಲ ಉಂಟಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More