ಹೆಬ್ಬಾಳ ಸಮೀಪ ನಂದಿನಿ ಟ್ಯಾಂಕರ್ ಪಲ್ಟಿ: ರಸ್ತೆ ಪಾಲಾದ 14 ಸಾವಿರ ಲೀಟರ್ ಹಾಲು
ಬೆಂಗಳೂರಿನ ಹೆಬ್ಬಾಳ ಸಮೀಪ ಬ್ರೇಕ್ ಫೇಲ್ಯೂರ್‌ನಿಂದ ನಂದಿನಿ ಹಾಲು ಟ್ಯಾಂಕರ್ ಪಲ್ಟಿಯಾಗಿ 14,000 ಲೀಟರ್ ಹಾಲು ರಸ್ತೆಗೆ ಚೆಲ್ಲಿದೆ. ಅಪಘಾತದ ಪರಿಣಾಮವಾಗಿ ಹೆಬ್ಬಾಳ ಸುತ್ತಮುತ್ತ ಸುಮಾರು ಮೂರು ಕಿಲೋಮೀಟರ್‌ಗೂ ಅಧಿಕ ದೂರ ಟ್ರಾಫಿಕ್ ಜಾಮ್ ಉಂಟಾಗಿದೆ. ಸಂಚಾರಿ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸಲು ನೆರವು ನೀಡಿ, ಟ್ರಾಫಿಕ್ ನಿಯಂತ್ರಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 03: ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದು ಮಣ್ಣುಪಾಲಾಗಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಸಮೀಪದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟ್ಯಾಂಕರ್ KMF ಹಾಲು ಕೇಂದ್ರಕ್ಕೆ ಬರ್ತಿತ್ತು ಎನ್ನಲಾಗಿದ್ದು, ಸ್ಥಳಕ್ಕೆ ಸಂಜಯ್ ನಗರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
