ಹೆಬ್ಬಾಳ ಸಮೀಪ ನಂದಿನಿ ಟ್ಯಾಂಕರ್ ಪಲ್ಟಿ: ರಸ್ತೆ ಪಾಲಾದ 14 ಸಾವಿರ ಲೀಟರ್ ಹಾಲು

Edited By:

Updated on: Sep 03, 2026 | 7:36 PM

ಬೆಂಗಳೂರಿನ ಹೆಬ್ಬಾಳ ಸಮೀಪ ಬ್ರೇಕ್ ಫೇಲ್ಯೂರ್‌ನಿಂದ ನಂದಿನಿ ಹಾಲು ಟ್ಯಾಂಕರ್ ಪಲ್ಟಿಯಾಗಿ 14,000 ಲೀಟರ್ ಹಾಲು ರಸ್ತೆಗೆ ಚೆಲ್ಲಿದೆ. ಅಪಘಾತದ ಪರಿಣಾಮವಾಗಿ ಹೆಬ್ಬಾಳ ಸುತ್ತಮುತ್ತ ಸುಮಾರು ಮೂರು ಕಿಲೋಮೀಟರ್‌ಗೂ ಅಧಿಕ ದೂರ ಟ್ರಾಫಿಕ್ ಜಾಮ್ ಉಂಟಾಗಿದೆ. ಸಂಚಾರಿ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸಲು ನೆರವು ನೀಡಿ, ಟ್ರಾಫಿಕ್ ನಿಯಂತ್ರಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 03: ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದು ಮಣ್ಣುಪಾಲಾಗಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಸಮೀಪದ ಸರ್ವೀಸ್​ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಟ್ಯಾಂಕರ್​​ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟ್ಯಾಂಕರ್​​ KMF ಹಾಲು ಕೇಂದ್ರಕ್ಕೆ ಬರ್ತಿತ್ತು ಎನ್ನಲಾಗಿದ್ದು, ಸ್ಥಳಕ್ಕೆ ಸಂಜಯ್ ನಗರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us