ಮಾಧ್ಯಮ ಪ್ರತಿನಿಧಿಗಳಿಂದ ತರಾಟೆಗೊಳಗಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಿಟಿ ಶ್ರೀಧರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 15, 2023 | 4:44 PM

ಶ್ರೀಧರ್ ಅವರು ಇಂದು ರಾಮನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸುವಾಗ ಮಾಧ್ಯಮದವರು ಕೇಳಿದ ಕೆಲ ತೀಕ್ಷ್ಣ ಪ್ರಶ್ನೆಗಳಿಗೆ ನಿರುತ್ತರಾದರು ಮತ್ತು ಉತ್ತರ ತೋಚದೆ ತಬ್ಬಿಬ್ಬಾದರು.

ರಾಮನಗರ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಿಟಿ ಶ್ರೀಧರ್ (BT Sridhar) ಇಂದು ರಾಮನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸುವಾಗ ಮಾಧ್ಯಮದವರು ಕೇಳಿದ ಕೆಲ ತೀಕ್ಷ್ಣ ಪ್ರಶ್ನೆಗಳಿಗೆ ನಿರುತ್ತರಾದರು ಮತ್ತು ಉತ್ತರ ತೋಚದೆ ತಬ್ಬಿಬ್ಬಾದರು. ನಿನ್ನೆ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಿಸುವಾಗ (toll collection) ಅಷ್ಟೆಲ್ಲ ಗಲಾಟೆಗಳಾದರೂ ನೀವು ಸುದ್ದಿಗೋಷ್ಟಿ ನಡೆಸಿ ಜನರ ಗೊಂದಲಗಳನ್ನು ಪರಿಹರಿಸುವ ಪ್ರಯತ್ನ ಯಾಕೆ ಮಾಡಲಿಲ್ಲ ಅಂತ ಪತ್ರಕರ್ತರು ಕೇಳಿದಾಗ ಶ್ರೀದರ್ ಆರೋಗ್ಯದ ಸಮಸ್ಯೆಗಳನ್ನು (health issues) ಹೇಳಿಕೊಂಡರು. ಹಾಗಾದರೆ ಇವತ್ಯಾಕೆ ಪ್ರೆಸ್ಸರ್ ನಡೆಸುತ್ತಿದ್ದೀರಿ ಅಂತ ಕೇಳಿದಾಗ ಪರಿಸ್ಥಿತಿ ಕೈ ಮೀರಿ ಹೋಗುತ್ತಿರುವುದರಿಂದ ನಡೆಸಬೇಕಾಗಿದೆ ಅಂತ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.