ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೊಮ್ಮನಹಳ್ಳಿಯಲ್ಲಿ ಒಬ್ಬ ಬೆತ್ತಲೆ ಕಳ್ಳ 25 ಲಕ್ಷ ರೂ. ಮೌಲ್ಯದ 85 ಮೊಬೈಲ್ ಫೋನ್‌ಗಳನ್ನು ಕಳವು ಮಾಡಿದ್ದಾನೆ. ಗೋಡೆ ಕೊರೆದು ಮೊಬೈಲ್ ಅಂಗಡಿಗೆ ನುಗ್ಗಿ ಈ ಕೃತ್ಯ ಎಸಗಿದ್ದಾನೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಈ ಕಳ್ಳನ ಐನಾತಿ ಕೃತ್ಯ ಪೊಲೀಸರನ್ನು ಆಶ್ಚರ್ಯಚಕಿತಗೊಳಿಸಿದೆ.
ಬೆಂಗಳೂರು, ಮೇ 15: ನಗರದ ಬೊಮ್ಮನಹಳ್ಳಿಯಲ್ಲಿ ಕಳ್ಳನೊಬ್ಬ (Thief) ಬೆತ್ತಲೆಯಾಗಿ ಬಂದು, ಗೋಡೆ ಕೊರೆದು ಕಳ್ಳತನ ಮಾಡಿರುವಂತ ಘಟನೆ ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿ ಬೆತ್ತಲೆಯಾಗಿ ಎಂಟ್ರಿ ಕೊಟ್ಟು ಕೃತ್ಯವೆಸಗಿ ಪರಾರಿಯಾಗಿದ್ದಾನೆ. ಮೊಬೈಲ್ ಶಾಪ್ ನುಗ್ಗಿ ಬರೋಬ್ಬರಿ 85 ಮೊಬೈಲ್ ಎಗರಿಸಿದ್ದಾನೆ. ದಿನೇಶ್ ಎಂಬುವವರ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್ನಲ್ಲಿ ಕೃತ್ಯವೆಸಗಲಾಗಿದೆ. ಅನೇಕ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳ ಬಟ್ಟೆಯ ಜಾಡು ಹಿಡಿಯುತ್ತಾರೆ. ಹಾಗಾಗಿ ಪೊಲೀಸರಿಗೆ ಯಾಮಾರಿಸಲು ಬೆತ್ತಲೆಯಾಗಿ ಕಳ್ಳತನಕ್ಕಿಳಿದಿದ್ದಾನೆ. ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: May 15, 2025 10:46 AM
Latest Videos

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್ನಲ್ಲಿ ಸಿಲಿಕಾನ್ ಸಿಟಿ ಕೂಲ್ ಕೂಲ್

ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್

ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
