ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ

Edited By:

Updated on: May 15, 2025 | 11:03 AM

ಬೊಮ್ಮನಹಳ್ಳಿಯಲ್ಲಿ ಒಬ್ಬ ಬೆತ್ತಲೆ ಕಳ್ಳ 25 ಲಕ್ಷ ರೂ. ಮೌಲ್ಯದ 85 ಮೊಬೈಲ್ ಫೋನ್‌ಗಳನ್ನು ಕಳವು ಮಾಡಿದ್ದಾನೆ. ಗೋಡೆ ಕೊರೆದು ಮೊಬೈಲ್ ಅಂಗಡಿಗೆ ನುಗ್ಗಿ ಈ ಕೃತ್ಯ ಎಸಗಿದ್ದಾನೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಈ ಕಳ್ಳನ ಐನಾತಿ ಕೃತ್ಯ ಪೊಲೀಸರನ್ನು ಆಶ್ಚರ್ಯಚಕಿತಗೊಳಿಸಿದೆ.

ಬೆಂಗಳೂರು, ಮೇ 15: ನಗರದ ಬೊಮ್ಮನಹಳ್ಳಿಯಲ್ಲಿ ಕಳ್ಳನೊಬ್ಬ (Thief) ಬೆತ್ತಲೆಯಾಗಿ ಬಂದು, ಗೋಡೆ ಕೊರೆದು ಕಳ್ಳತನ ಮಾಡಿರುವಂತ ಘಟನೆ ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿ ಬೆತ್ತಲೆಯಾಗಿ ಎಂಟ್ರಿ ಕೊಟ್ಟು ಕೃತ್ಯವೆಸಗಿ ಪರಾರಿಯಾಗಿದ್ದಾನೆ. ಮೊಬೈಲ್ ಶಾಪ್ ನುಗ್ಗಿ ಬರೋಬ್ಬರಿ 85 ಮೊಬೈಲ್ ಎಗರಿಸಿದ್ದಾನೆ.  ದಿನೇಶ್ ಎಂಬುವವರ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್​ನಲ್ಲಿ ಕೃತ್ಯವೆಸಗಲಾಗಿದೆ. ಅನೇಕ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳ ಬಟ್ಟೆಯ ಜಾಡು ಹಿಡಿಯುತ್ತಾರೆ. ಹಾಗಾಗಿ ಪೊಲೀಸರಿಗೆ ಯಾಮಾರಿಸಲು ಬೆತ್ತಲೆಯಾಗಿ ಕಳ್ಳತನಕ್ಕಿಳಿದಿದ್ದಾನೆ. ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 15, 2025 10:46 AM
Follow Us
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More