ಬೆಂಗಳೂರು-ನೆಲಮಂಗಲ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

Edited By:

Updated on: Sep 05, 2026 | 12:59 PM

ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ಪ್ರವಾಸಿ ತಾಣ ಹಾಗೂ ಸ್ವಂತ ಊರುಗಳಿಗೆ ಹೊರಟಿರುವ ಜನರಿಂದಾಗಿ ನೆಲಮಂಗಲ ಸಮೀಪ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದು, ಸವಾರರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಸಂಚಾರ ಸುಗಮಗೊಳಿಸಲು ಹೆದ್ದಾರಿ ಪೊಲೀಸರು ಶ್ರಮಿಸುತ್ತಿದ್ದಾರೆ.

ನೆಲಮಂಗಲ, ಸೆಪ್ಟೆಂಬರ್ 05: ವಾರಾಂತ್ಯದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ಹಾಗೂ ಸ್ವಂತ ಊರುಗಳತ್ತ ಜನರು ಹೊರಟಿರುವುದರಿಂದ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನ ದಟ್ಟಣೆ ನಿರ್ಮಾಣವಾಗಿದೆ. ನೆಲಮಂಗಲ ಸಮೀಪದ ರಸ್ತೆಯಲ್ಲಿ ಕಿಲೋಮೀಟರ್‌ಗಟ್ಟಲೆ ಸಾಲಾಗಿ ನಿಂತಿರುವ ವಾಹನಗಳಿಂದಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಗಿದೆ. ವೀಕೆಂಡ್ ಮೋಜು-ಮಸ್ತಿಗಾಗಿ ಪ್ರವಾಸ ಕೈಗೊಂಡ ಸಾರ್ವಜನಿಕರು ರಸ್ತೆಯಲ್ಲೇ ಸಿಲುಕಿ ಹೈರಾಣಾಗಿದ್ದಾರೆ. ಹೆದ್ದಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸಂಚಾರ ದಟ್ಟಣೆ ತಿಳಿಗೊಳಿಸಲು ಹರಸಾಹಸ ಪಡುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 05, 2026 12:24 PM
Loading...
Unable to load recommendations.
Follow Us
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More