ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ: ಸಿಸಿಟಿವಿ​​ ಕಣ್ಗಾವಲು

Updated on: Dec 30, 2025 | 6:54 PM

ಬೆಂಗಳೂರಿನ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಮುಂಬರುವ ಹೊಸ ವರ್ಷದ ಆಚರಣೆಗಳಿಗಾಗಿ ಭದ್ರತಾ ಸಿದ್ಧತೆಗಳು ಆರಂಭಗೊಂಡಿವೆ. ಸಾರ್ವಜನಿಕರ ಸುರಕ್ಷತೆ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಅಳವಡಿಸುತ್ತಿದ್ದಾರೆ. ಜನಸಂದಣಿ ನಿರ್ವಹಣೆ ಮತ್ತು ಸುಗಮ ಸಂಚಾರಕ್ಕೆ ಈ ಕ್ರಮಗಳು ಅತ್ಯಗತ್ಯ.

ಬೆಂಗಳೂರು, ಡಿಸೆಂಬರ್​​ 30: ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. 2025ಕ್ಕೆ ಗುಡ್​ ಬೈ ಹೇಳಿ 2026ವೆಲ್​ಕಂ ಮಾಡಲು ಜನ ತುದಿಗಾಲಲ್ಲಿ ಕಾದು ನಿಂತಿದ್ದಾರೆ. ಪಾರ್ಟಿಗಾಗಿ ಭರ್ಜರಿ ಪ್ಲ್ಯಾನಿಂಗ್​ನಲ್ಲಿ ತೊಡಗಿದ್ದಾರೆ. ನಗರದಲ್ಲಿ ವರ್ಷಾಚರಣೆ ನಡೆಯೋ ರಸ್ತೆಗಳಂತೂ ಜಗಮಗ ಅಂತಿವೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆಗಾಗಿ ಭದ್ರತಾ ಸಿದ್ಧತೆಗಳು ಆರಂಭಗೊಂಡಿವೆ. ಬ್ಯಾರಿಕೇಡ್ ಅಳವಡಿಕೆ, ಸಿಸಿ ಕ್ಯಾಮೆರಾ, ವಾಚ್ ಟವರ್​ಗಳನ್ನು ಅಳವಡಿಕೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಣ್ಗಾವಲುವಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Dec 30, 2025 06:45 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More