ಬೆಂಗಳೂರಿನ ಪ್ರತಿಷ್ಠಿತ ಮಾಲ್ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: ಕಸದ ರಾಶಿ ಪತ್ತೆ; 85 ಸಾವಿರ ದಂಡ
ಬೆಂಗಳೂರಿನ ಕೋರಮಂಗಲದ ನೆಕ್ಸಸ್ ಮಾಲ್‌ನ ಫುಡ್ ಕೋರ್ಟ್ ಮೇಲೆ ಜಿಬಿಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಘನತ್ಯಾಜ್ಯ ನಿಯಮಗಳನ್ನು ಉಲ್ಲಂಘಿಸಿ, ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸದೆ ಇರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಾಲ್‌ನ 10 ಮಳಿಗೆಗಳಿಗೆ ಒಟ್ಟು ₹85,000 ದಂಡ ವಿಧಿಸಲಾಗಿದೆ. ವಿಡಿಯೋ ನೋಡಿ.
ಬೆಂಗಳೂರು, ಆಗಸ್ಟ್ 28: ಬೆಂಗಳೂರಿನ ಕೋರಮಂಗಲದಲ್ಲಿರುವ ಪ್ರಸಿದ್ಧ ನೆಕ್ಸಸ್ ಮಾಲ್ ಮೇಲೆ ಜಿಬಿಎ ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದಾರೆ. ದಾಳಿ ವೇಳೆ ಫುಡ್ ಕೋರ್ಟ್‌ನಲ್ಲಿ ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ರಾಶಿ ರಾಶಿ ಕಸವನ್ನು ಸಮರ್ಪಕವಾಗಿ ವಿಂಗಡಿಸದೆ ಅಸಡ್ಡೆ ತೋರಿರುವುದು ಬೆಳಕಿಗೆ ಬಂದಿದೆ. ಸಾರ್ವಜನಿಕರ ಆರೋಗ್ಯ ಹಾಗೂ ಸ್ವಚ್ಛತೆಯ ಹಿತದೃಷ್ಟಿಯಿಂದ ನಿಯಮ ಉಲ್ಲಂಘಿಸಿದ ಮೆಕ್‌ಡೊನಾಲ್ಡ್ಸ್ ಸೇರಿದಂತೆ ಮಾಲ್‌ನ 10 ಮಳಿಗೆಗಳಿಗೆ ಒಟ್ಟು 85,000 ರೂಪಾಯಿ ದಂಡ ವಿಧಿಸುವ ಮೂಲಕ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 28, 2026 04:41 PM
Loading...
Unable to load recommendations.
Follow Us
