ಅಶ್ವಿನಿ ಪುನೀತ್ ರಾಜ್ಕುಮಾರ್ ಮನೆಗೆ ಶೋಭಾ ಕರಂದ್ಲಾಜೆ ಭೇಟಿ
Ashwini Puneeth Rajkumar: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಭೇಟಿಯಾಗಿ ಬೆಂಬಲ ಕೇಳಿದ್ದಾರೆ.
ಲೋಕಸಭೆ ಚುನಾವಣೆ (Lok Sabha Elections) ಘೋಷಣೆಯಾಗಿದೆ. ರಾಜಕೀಯ ಪಕ್ಷಗಳು ಟಿಕೆಟ್ ಘೋಷಣೆ ಮಾಡುತ್ತಿವೆ. ಬಿಜೆಪಿ ಈಗಾಗಲೇ ಟಿಕೆಟ್ ಘೋಷಣೆ ಮಾಡಿದ್ದು ಕೆಲವು ಕ್ಷೇತ್ರಗಳನ್ನಷ್ಟೆ ಬಾಕಿ ಉಳಿಸಿಕೊಂಡಿದೆ. ಟಿಕೆಟ್ ಪಡೆದ ಅಭ್ಯರ್ಥಿಗಳು ಕ್ಷೇತ್ರದ ಮುಖಂಡರನ್ನು ಭೇಟಿಯಾಗಿ ಚುನಾವಣೆಯಲ್ಲಿ ಬೆಂಬಲ ಕೇಳುತ್ತಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಕಳೆದ ಬಾರಿ ಅವರು ಉಡುಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಪ್ರಚಾರ ಕಾರ್ಯವನ್ನು ಶೋಭಾ ಕರಂದ್ಲಾಜೆ ಆರಂಭ ಮಾಡಿದ್ದಾರೆ. ಇಂದು ಶೋಭಾ ಕರಂದ್ಲಾಜೆ ಅವರು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneethrajkumar) ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದರು. ಈ ಸಮಯದಲ್ಲಿ ಮಾಜಿ ಸಚಿವ ಅಶ್ವತ್ಥನಾರಾಯಣ ಸಹ ಜೊತೆಗಿದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇಂದು ಫ್ರೀಡಂಪಾರ್ಕ್ನಲ್ಲಿ ಜೆಡಿಎಸ್ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!

