ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಬೆಸ್ಕಾಂ, ಬಿಬಿಎಂಪಿ, ಬಿಡಬ್ಲ್ಯುಎಸ್ಎಸ್ಬಿ ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ಹೊಸ ವರ್ಷದಂದು ರಜೆ ಇಲ್ಲ ಎಂದು ಘೋಷಿಸಿದ್ದಾರೆ. ಜನರಿಗೆ ತೊಂದರೆಯಾಗದಂತೆ ನಿರಂತರ ಕಾರ್ಯ ನಿರ್ವಹಣೆಗೆ ಅವರು ಸೂಚಿಸಿದ್ದಾರೆ. ಈ ನಿರ್ಧಾರವು ಹೊಸ ವರ್ಷದ ಆಚರಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ಬೆಂಗಳೂರು, ಡಿಸೆಂಬರ್ 30: 2024 ಕಳೆಯುತ್ತಿದೆ.. 2025ರ ಸ್ವಾಗತಕ್ಕೆ ಕೌಂಟ್ಡೌನ್ ಶುರುವಾಗಿದೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ಸಿಲಿಕಾನ್ ಸಿಟಿ ಸಜ್ಜಾಗಿದೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar), ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ. ಬೆಸ್ಕಾಂ, ಬಿಬಿಎಂಪಿ, BWSSB ಸೇರಿ ಯಾವುದೇ ಅಧಿಕಾರಿಗಳಿಗೆ ರಜೆ ಇಲ್ಲ. ಜನಸಾಮಾನ್ಯರಿಗೆ ತೊಂದರೆ ಆಗದಂತೆ ಕೆಲಸ ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos