ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್

Edited By:

Updated on: Dec 30, 2024 | 8:23 PM

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಬೆಸ್ಕಾಂ, ಬಿಬಿಎಂಪಿ, ಬಿಡಬ್ಲ್ಯುಎಸ್ಎಸ್ಬಿ ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ಹೊಸ ವರ್ಷದಂದು ರಜೆ ಇಲ್ಲ ಎಂದು ಘೋಷಿಸಿದ್ದಾರೆ. ಜನರಿಗೆ ತೊಂದರೆಯಾಗದಂತೆ ನಿರಂತರ ಕಾರ್ಯ ನಿರ್ವಹಣೆಗೆ ಅವರು ಸೂಚಿಸಿದ್ದಾರೆ. ಈ ನಿರ್ಧಾರವು ಹೊಸ ವರ್ಷದ ಆಚರಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಬೆಂಗಳೂರು, ಡಿಸೆಂಬರ್​ 30: 2024 ಕಳೆಯುತ್ತಿದೆ.. 2025ರ ಸ್ವಾಗತಕ್ಕೆ ಕೌಂಟ್​ಡೌನ್ ಶುರುವಾಗಿದೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ಸಿಲಿಕಾನ್​ ಸಿಟಿ ಸಜ್ಜಾಗಿದೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar)​, ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ. ಬೆಸ್ಕಾಂ, ಬಿಬಿಎಂಪಿ, BWSSB ಸೇರಿ ಯಾವುದೇ ಅಧಿಕಾರಿಗಳಿಗೆ ರಜೆ ಇಲ್ಲ. ಜನಸಾಮಾನ್ಯರಿಗೆ ತೊಂದರೆ ಆಗದಂತೆ ಕೆಲಸ ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More