ಬೆಂಗಳೂರು: ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು, ಗುಂಡಿಗಳ ಸಮಸ್ಯೆಯಿಂದ ಸವಾರರು ಕಂಗಾಲು

Edited By:

Updated on: Oct 22, 2026 | 11:09 AM

ದಸರಾ ಹಬ್ಬದ ನಂತರ ಬೆಂಗಳೂರಿಗೆ ಮರಳುತ್ತಿರುವ ಪ್ರಯಾಣಿಕರಿಗೆ ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು ಮತ್ತು ಬೃಹತ್ ಗುಂಡಿಗಳು ತೀವ್ರ ತೊಂದರೆ ನೀಡಿವೆ. ರೈಲ್ವೆ ಇಲಾಖೆಯ ಸಮನ್ವಯದ ಕೊರತೆಯಿಂದಾಗಿ ಕಾಮಗಾರಿ ಅಪೂರ್ಣಗೊಂಡಿದ್ದು, ಇದರ ಪರಿಣಾಮವಾಗಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಅಂಡರ್‌ಪಾಸ್‌ನಲ್ಲಿ ನೀರು ಸಂಗ್ರಹಗೊಂಡು ವಾಹನ ಸವಾರರು ಪ್ರತಿದಿನವೂ ಪರದಾಡುವಂತಾಗಿದೆ.

ಬೆಂಗಳೂರು, ಅಕ್ಟೋಬರ್ 22: ಬೆಂಗಳೂರಿನ ಪ್ರಮುಖ ಓಕಳಿಪುರಂ ಅಂಡರ್‌ಪಾಸ್ ದಸರಾ ಹಬ್ಬದ ರಜೆ ಮುಗಿಸಿ ಬುಧವಾರ ರಾತ್ರಿ ಬೆಂಗಳೂರಿಗೆ ಬರುತ್ತಿದ್ದವರನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಇಲ್ಲಿ ಕೊಳಚೆ ನೀರು ತುಂಬಿ ನಿಂತಿದ್ದು, ಬೃಹತ್ ಗುಂಡಿಗಳು ನಿರ್ಮಾಣವಾಗಿವೆ. ಇದು ಪ್ರತಿದಿನವೂ ಓಡಾಡುವ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ದೊಡ್ಡ ಕಿರಿಕಿರಿಯನ್ನುಂಟುಮಾಡುತ್ತಿದೆ. ರೈಲ್ವೆ ಇಲಾಖೆಯ ಸಮನ್ವಯದ ಕೊರತೆಯಿಂದಾಗಿ ಅಂಡರ್‌ಪಾಸ್ ಕಾಮಗಾರಿ ಅರ್ಧಕ್ಕೆ ನಿಂತಿದೆ. ಈ ಸಮಸ್ಯೆಯಿಂದಾಗಿ ಟ್ರಾಫಿಕ್ ಜಾಮ್ ಸಾಮಾನ್ಯವಾಗಿದೆ.

ಹಲವಾರು ಜಿಲ್ಲೆಗಳನ್ನು ಸಂಪರ್ಕಿಸುವ ರಸ್ತೆಯಲ್ಲಿರುವ ಈ ಅಂಡರ್‌ಪಾಸ್‌ನಲ್ಲಿ ಮಳೆ ಇಲ್ಲದಿದ್ದರೂ ಕೊಳಚೆ ನೀರು ನಿಲ್ಲುತ್ತಿದೆ. ಅಪೂರ್ಣ ಕಾಮಗಾರಿ, ಗುಂಡಿಗಳು ಮತ್ತು ಕೊಳಚೆ ನೀರು ಒಟ್ಟಾಗಿ ಪ್ರಯಾಣಿಕರಿಗೆ ನರಕ ಸದೃಶ ಪರಿಸ್ಥಿತಿ ನಿರ್ಮಿಸಿವೆ. ಬಸ್ಸುಗಳು, ಕಾರುಗಳು ಮತ್ತು ಬೈಕ್‌ಗಳು ನಿಧಾನವಾಗಿ ಚಲಿಸುವುದರಿಂದ ನೀರು ಸಿಡಿದು ಇತರರಿಗೆ ತೊಂದರೆಯಾಗುತ್ತಿದೆ. ಸ್ಕಿಡ್ ಆಗಿ ಬೀಳುವ ಸಾಧ್ಯತೆಯೂ ಇದೆ. ಲುಲು ಮಾಲ್ ವರೆಗೂ ಟ್ರಾಫಿಕ್ ಜಾಮ್ ವಿಸ್ತರಿಸಿದೆ. ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನಹರಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More