ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಹಿಂಸಾತ್ಮಕ ಘಟನೆಯ ನಂತರ ಸಚಿವ ಜಮೀರ್ ಅಹ್ಮದ್ ಖಾನ್ ಜೆ.ಜೆ. ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ದೇವಿಯ ರಥದ ಮೇಲೆ ಕಲ್ಲು ಎಸೆದ ಘಟನೆಗೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಜನವರಿ 05: ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಹಿಂಸಾತ್ಮಕ ಘಟನೆಯ ನಂತರ ಸಚಿವ ಜಮೀರ್ ಅಹ್ಮದ್ ಖಾನ್ ಜೆ.ಜೆ. ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ದೇವಿಯ ರಥದ ಮೇಲೆ ಕಲ್ಲು ಎಸೆದ ಘಟನೆಗೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.
ಕೇವಲ ಅಪ್ರಾಪ್ತರು ಮಾತ್ರ ಈ ಕೃತ್ಯ ನಡೆಸಿದ್ದಾರೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲವೆಂದ ಜಮೀರ್, ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚುವಂತೆ ಡಿಸಿಪಿಗೆ ಆದೇಶಿಸಲಾಗಿದೆ. ಚಾಮರಾಜಪೇಟೆಯಲ್ಲಿ ಹಿಂದೂ–ಮುಸ್ಲಿಂರು ಸಹೋದರರಂತೆ ಬದುಕುತ್ತಿದ್ದು, ಈ ರೀತಿಯ ಘಟನೆ ಹಿಂದೆ ನಡೆದಿಲ್ಲ. ಈ ಪ್ರದೇಶದಲ್ಲಿ ಗಾಂಜಾ ಸಮಸ್ಯೆ ಸ್ವಲ್ಪ ಮಟ್ಟಿಗೆ ಹೆಚ್ಚಿರುವುದು ಸತ್ಯವಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ತಪ್ಪು ಮಾಡಿದವರನ್ನು ಯಾವುದೇ ಮುಲಾಜಿಲ್ಲದೆ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
