ಸ್ವತಃ ರೋಡ್‌ಗಿಳಿದು ಗುಂಡಿ ಮುಚ್ಚಿ ಸರ್ಕಾರದ ವಿರುದ್ಧಆಕ್ರೋಶ ವ್ಯಕ್ತಪಡಿಸಿದ ವಿಪಕ್ಷ ನಾಯಕ ಆರ್. ಅಶೋಕ್
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲೂ ರಸ್ತೆ ಗುಂಡಿ ಸಮಸ್ಯೆ ತೀರಾ ಹೆಚ್ಚಿವೆ. ರಸ್ತೆ ಗುಂಡಿಗಳನ್ನು ಶ್ರೀಘ್ರದಲ್ಲೇ ಮುಚ್ಚಿ ಈ ಸಮಸ್ಯೆಯನ್ನು ಸರಿಪಡಿಸುವಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದೀಗ ಸ್ವತಃ ವಿಪಕ್ಷ ನಾಯಕ ಆರ್. ಅಶೋಕ್ ರಸ್ತೆಗಿಳಿದು ಗುಂಡಿ ಮುಚ್ಚುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 24: ಈಗ ಎಲ್ಲಿ ನೋಡಿದ್ರೂ ರಸ್ತೆ ಗುಂಡಿಗಳದ್ದೇ (Pothole) ಸಮಸ್ಯೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರಸ್ತೆಗಳು ಹದಗೆಟ್ಟು ಹೋಗಿವೆ. ಈ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾದ ಬಳಿಕ ಸರ್ಕಾರ ಎಚ್ಚೆತ್ತುಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪ್ರಾರಂಭಿಸಿದ್ದು, ಈ ನಡುವೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದೆ. ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಶಾಸಕ ರವಿ ಸುಬ್ರಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಆರ್. ಅಶೋಕ್ ಸ್ವತಃ ತಾವೇ ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 24, 2025 02:22 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

