ಇದು ಪಂಗನಾಮದ ಸಮೀಕ್ಷೆ; ಜಾತಿಗಣತಿಯ ಬಗ್ಗೆ ಅಶೋಕ್‌ ಮಾತು

Updated on: Sep 28, 2025 | 6:44 PM

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಆರಂಭಿಸಿದೆ. ಈ ಸಮೀಕ್ಷೆ ನಡೆಯಬಾರದೆಂದು ಹಲವು ಸಚಿವರು ವಿರೋಧವನ್ನು ಕೂಡ ವ್ಯಕ್ತಪಡಿಸಿದ್ದರು. ಇದೀಗ ಈ ಜಾತಿ ಗಣತಿಯ ಬಗ್ಗೆ ಮಾತನಾಡಿದ ಆರ್.‌ ಅಶೋಕ್‌, ಇದೆಲ್ಲಾ ಸಾರ್ವಜನಿಕರ ಬಿಪಿಎಲ್‌ ಕಾರ್ಡ್‌, ಆರೋಗ್ಯ ಕಾರ್ಡ್‌ ರದ್ದು ಮಾಡಲು ಸರ್ಕಾರ ನಡೆಸಿದ ಹುನ್ನಾರ, ಇದು ಜಾತಿ ಸಮೀಕ್ಷೆಯಲ್ಲ ಪಂಗನಾಮ ಸಮೀಕ್ಷೆ ಎಂದು ಕಿಡಿ ಕಾರಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್‌ 28: ಪರ ವಿರೋಧಗಳ ನಡುವೆಯೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ (Karnataka Caste Census) ಸಮೀಕ್ಷೆಯನ್ನು ಆರಂಭಿಸಿದೆ. ವಿರೋಧ ಪಕ್ಷಗಳು ಈ ಸಮೀಕ್ಷೆಗೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದವು. ಇದೀಗ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಯ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಆರ್.‌ ಅಶೋಕ್‌, ಈ ಸಮೀಕ್ಷೆಯಲ್ಲಿ ಸಾರ್ವಜನಿಕರ ವೈಯಕ್ತಿಕ ಸೂಕ್ಷ್ಮ ವಿಚಾರಗಳ ಬಗ್ಗೆ ಕೇಳಲಾಗಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಇಲ್ಲಿ ನೀವು ಶೇರ್‌ ಮಾಡುವುದು ಕಡ್ಡಾಯವಲ್ಲ. ಇದೆಲ್ಲಾ ಬಿಪಿಎಲ್‌ ಕಾರ್ಡ್‌, ಆರೋಗ್ಯ ಕಾರ್ಡ್‌ ರದ್ದು ಮಾಡಲು ಸರ್ಕಾರ ನಡೆಸುತ್ತಿರುವ ಹುನ್ನಾರ. ಇದು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲ ಇದು ಸಿದ್ದರಾಮಯ್ಯನವರ ಜಾತಿ ಸಮೀಕ್ಷೆ. ಇದು ಪಂಗನಾಮದ ಸಮೀಕ್ಷೆ ಎಂದು ಟೀಕಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Sep 28, 2025 06:43 PM