ಬೆಂಗಳೂರು: ಮೂಲಸೌಕರ್ಯಕ್ಕೆ ಆಗ್ರಹಿಸಿ ಪಾಣತ್ತೂರಿನಲ್ಲಿ ನಿವಾಸಿಗಳ ಪ್ರತಿಭಟನೆ, ಪೊಲೀಸರ ಜತೆ ಮಾತಿನ ಚಕಮಕಿ
ಬೆಂಗಳೂರಿಗೆ ಸರಿಯಾದ ಮೂಲಸೌಕರ್ಯ ಕಲ್ಪಿಸಿಕೊಡಿ, ಇಲ್ಲವಾದರೆ ನಮ್ಮ ತೆರಿಗೆ ಹಣವನ್ನು ರಿಫಂಡ್ ಮಾಡಿ ಎಂದು ಜನ ಪ್ರತಿಭಟನೆ ನಡೆಸಿದ ವಿಡಿಯೋಗಳು ಕಳೆದ ತಿಂಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದೀಗ ಪಾಣತ್ತೂರಿನಲ್ಲಿ ಅಲ್ಲಿನ ನಿವಾಸಿಗಳು ಮೂಲಸೌಕರ್ಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆದಿದೆ.
ಬೆಂಗಳೂರು, ಸೆಪ್ಟೆಂಬರ್ 20: ಉತ್ತಮ ರಸ್ತೆ ಹಾಗೂ ಇತರ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಬೆಂಗಳೂರಿನ ಪಾಣತ್ತೂರಿನಲ್ಲಿ ನಿವಾಸಿಗಳು ಶನಿವಾರ ಪ್ರತಿಭಟನೆ ನಡೆಸಿದರು. ಇದೇ ವೇಳೆ, ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ಹಿಂಪಡೆಯುವಂತೆ ಸೂಚಿಸಿದ್ದರಿಂದ ನಿವಾಸಿಗಳು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ವಿಡಿಯೋ ಇಲ್ಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ