ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ; ಕಾರಣ ಇಲ್ಲಿದೆ

Updated on: Dec 24, 2025 | 3:38 PM

ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಅನಧಿಕೃತ ಶಾಲೆಗಳು ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಶಿಕ್ಷಣ ಇಲಾಖೆಯ ಅನುಮತಿ ಇಲ್ಲದೆ ಬೋಧನೆ ನಡೆಸುತ್ತಿರುವ ಈ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಡಿಡಿಪಿಐ ಮತ್ತು ಬಿಇಒಗಳಿಗೆ ಸೂಚನೆ ನೀಡಲಾಗಿದೆ. ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸುವ ಮೊದಲು ಶಾಲೆಗಳ ಮಾನ್ಯತೆಯನ್ನು ಪರಿಶೀಲಿಸಬೇಕು ಎಂದು ಇಲಾಖೆ ಎಚ್ಚರಿಸಿದೆ.

ಬೆಂಗಳೂರು, ಡಿಸೆಂಬರ್​​ 24: ನಗರದಲ್ಲಿ 50ಕ್ಕೂ ಹೆಚ್ಚು ಅನಧಿಕೃತ ಶಾಲೆಗಳು ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಶಿಕ್ಷಣ ಸಂಸ್ಥೆಗಳು  ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾರ್ಯನಿರ್ವಹಿಸುತ್ತಿದ್ದು, ಅನಧಿಕೃತವಾಗಿ ಬೋಧನೆ ನಡೆಸುತ್ತಿವೆ. ಇಂತಹ ಶಾಲೆಗಳ ಕುರಿತು ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಡಿಡಿಪಿಐ ಮತ್ತು ಬಿಇಒಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.  ಹೆಣ್ಣೂರು ರಸ್ತೆಯ ಯುರೋಸ್ಕೂಲ್, ಕಿಡ್ಸ್ ಕ್ಯಾಸಲ್ ಪೂರ್ವ ಪ್ರಾಥಮಿಕ ಶಾಲೆ ಸಿಂಗಸಂದ್ರ, ಯರೋ ಸ್ಕೂಲ್ ತಿಪ್ಪಸಂದ್ರ ಗುಂಜೂರು, ಗರೇಭಾವಿಪಾಳ್ಯದ ಅಪೋಲೊ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆ ಸೇರಿದಂತೆ ಹಲವು ನರ್ಸರಿ ಶಾಲೆಗಳಿಗೆ ಈಗಾಗಲೇ ನೋಟಿಸ್‌ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 24, 2025 03:37 PM