ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ, ವಿಡಿಯೋ ನೋಡಿ
ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ವಾಸ್ಕೋ-ಡಿ-ಗಾಮಾ ರೈಲಿನ ಚೈನ್ ಎಳೆದು ಕೆಲ ಪುಂಡರು ಪುಂಡಾಟ ಮೇರೆದಿದ್ದಾರೆ. ಅಷ್ಟೇ ಅಲ್ಲದೆ ಪ್ರಶ್ನೆ ಮಾಡಿದಕ್ಕೆ ಆರ್ಪಿಎಫ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಎಫ್ಐಆರ್ ದಾಖಲಾಗಿದೆ. ವಿಡಿಯೋ ನೋಡಿ.
ಬೆಂಗಳೂರು, ಡಿಸೆಂಬರ್ 15: ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ಕೆಲ ಪುಂಡರು ರಾದ್ಧಾಂತ ಸೃಷ್ಟಿಸಿದ ಘಟನೆ ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ವಾಸ್ಕೋ-ಡಿ-ಗಾಮಾ ರೈಲಿನಲ್ಲಿ ನಡೆದಿದೆ. ಕುಡಿದ ನಶೆಯಲ್ಲಿ ಪದೇ ಪದೇ ಚೈನ್ ಎಳೆದು ಕೆಲ ಪ್ರಯಾಣಿಕರು ಗಲಾಟೆ ಮಾಡಿದ್ದಾರೆ. ಚೈನ್ ಎಳೆದಿದ್ದನ್ನು ಪ್ರಶ್ನೆ ಮಾಡಿದ್ದ ಆರ್ಪಿಎಫ್ ಸಿಬ್ಬಂದಿ ಮೇಲೆ ಪುಂಡರಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ರೈಲು ತಡೆದು ಹಲ್ಲೆ ಆರೋಪದಡಿ ಯಶವಂತಪುರ ರೈಲ್ವೆ ಠಾಣೆಯಲ್ಲಿ RPF ಸಿಬ್ಬಂದಿಯಿಂದ ಮೂವರ ವಿರುದ್ಧ ದೂರು ನೀಡಲಾಗಿದೆ. ಎಫ್ಐಆರ್ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸರು, ಚೈನ್ ಎಳೆದಿದ್ದ ಪುಂಡರನ್ನು ವಶಕ್ಕೆ ಪಡೆದಿದ್ದಾರೆ. ಸ್ವಲ್ಪ ಸಮಯ ವಿಳಂಬದ ಬಳಿಕ ರೈಲು ಮತ್ತೆ ಪ್ರಯಾಣ ಮುಂದುವರೆಸಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 15, 2025 09:02 PM
