ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ, ವಿಡಿಯೋ ನೋಡಿ

Edited By:

Updated on: Dec 15, 2025 | 9:07 PM

ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ವಾಸ್ಕೋ-ಡಿ-ಗಾಮಾ ರೈಲಿನ ಚೈನ್ ಎಳೆದು ಕೆಲ ಪುಂಡರು ಪುಂಡಾಟ ಮೇರೆದಿದ್ದಾರೆ. ಅಷ್ಟೇ ಅಲ್ಲದೆ ಪ್ರಶ್ನೆ ಮಾಡಿದಕ್ಕೆ ಆರ್​ಪಿಎಫ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಎಫ್​​ಐಆರ್​ ದಾಖಲಾಗಿದೆ. ವಿಡಿಯೋ ನೋಡಿ.

ಬೆಂಗಳೂರು, ಡಿಸೆಂಬರ್​​ 15: ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ಕೆಲ ಪುಂಡರು ರಾದ್ಧಾಂತ ಸೃಷ್ಟಿಸಿದ ಘಟನೆ ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ವಾಸ್ಕೋ-ಡಿ-ಗಾಮಾ ರೈಲಿನಲ್ಲಿ ನಡೆದಿದೆ. ಕುಡಿದ ನಶೆಯಲ್ಲಿ ಪದೇ ಪದೇ ಚೈನ್​​ ಎಳೆದು ಕೆಲ ಪ್ರಯಾಣಿಕರು ಗಲಾಟೆ ಮಾಡಿದ್ದಾರೆ. ಚೈನ್ ಎಳೆದಿದ್ದನ್ನು ಪ್ರಶ್ನೆ ಮಾಡಿದ್ದ ಆರ್​ಪಿಎಫ್ ಸಿಬ್ಬಂದಿ ಮೇಲೆ ಪುಂಡರಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ರೈಲು ತಡೆದು ಹಲ್ಲೆ ಆರೋಪದಡಿ ಯಶವಂತಪುರ ರೈಲ್ವೆ ಠಾಣೆಯಲ್ಲಿ RPF ಸಿಬ್ಬಂದಿಯಿಂದ ಮೂವರ ವಿರುದ್ಧ ದೂರು ನೀಡಲಾಗಿದೆ. ಎಫ್​ಐಆರ್ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸರು, ಚೈನ್ ಎಳೆದಿದ್ದ ಪುಂಡರನ್ನು ವಶಕ್ಕೆ ಪಡೆದಿದ್ದಾರೆ. ಸ್ವಲ್ಪ ಸಮಯ ವಿಳಂಬದ ಬಳಿಕ ರೈಲು ಮತ್ತೆ ಪ್ರಯಾಣ ಮುಂದುವರೆಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Dec 15, 2025 09:02 PM
Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More