AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಬಿಗ್ ಇಂಪ್ಯಾಕ್ಟ್: ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ್ಯ

ಟಿವಿ9 ಬಿಗ್ ಇಂಪ್ಯಾಕ್ಟ್: ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ್ಯ

ಅರುಣ್ ಕುಮಾರ್​ ಆರ್​.
| Edited By: |

Updated on: Oct 12, 2026 | 3:33 PM

Share

ಬೆಂಗಳೂರಿನ ಪೀಣ್ಯ ಹೊರ ವರ್ತುಲ ರಸ್ತೆಯು ಒಂದು ದಶಕದಿಂದ ಗುಂಡಿಗಳಿಂದ ತುಂಬಿ ವಾಹನ ಸವಾರರಿಗೆ ನಿತ್ಯ ನರಕಯಾತನೆ ನೀಡಿತ್ತು. TV9 ಕನ್ನಡದ ಸರಣಿ ವರದಿಗಳ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಿಬಿಎ ಅಧಿಕಾರಿಗಳು ರಾತ್ರೋರಾತ್ರಿ ರಸ್ತೆಗೆ ಡಾಂಬರೀಕರಣ ಮಾಡಿಸಿದ್ದಾರೆ. ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಿದ TV9ಗೆ ವಾಹನ ಸವಾರರು ಮತ್ತು ಸ್ಥಳೀಯರು ಧನ್ಯವಾದ ಅರ್ಪಿಸಿದ್ದಾರೆ.

ಬೆಂಗಳೂರು, ಅ,12: ಕಳೆದ ಒಂದು ದಶಕದಿಂದ (10 ವರ್ಷಗಳು) ಯಾವುದೇ ಡಾಂಬರೀಕರಣವಿಲ್ಲದೆ, ಬೃಹತ್ ಗಾತ್ರದ ಗುಂಡಿಗಳಿಂದ ಕೂಡಿದ್ದು ದೈನಂದಿನ ಸಂಚಾರಕ್ಕೆ ನರಕಯಾತನೆ ನೀಡುತ್ತಿದ್ದ ಬೆಂಗಳೂರಿನ ಪೀಣ್ಯ ಔಟರ್ ರಿಂಗ್ ರಸ್ತೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. TV9 ಕನ್ನಡ ಸುದ್ದಿ ವಾಹಿನಿಯಲ್ಲಿ ಪ್ರಸಾರವಾದ ಸರಣಿ ವರದಿಗಳ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಿಬಿಎ (GBA) ಅಧಿಕಾರಿಗಳು, ರಾತ್ರೋರಾತ್ರಿ ರಸ್ತೆಗೆ ಡಾಂಬರೀಕರಣ ಮಾಡುವ ಮೂಲಕ ವಾಹನ ಸವಾರರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಡಾ. ರಾಜ್‌ಕುಮಾರ್ ಸಮಾಧಿಯಿಂದ ಜಾಲಹಳ್ಳಿ ಕ್ರಾಸ್ ವರೆಗಿನ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಹೋಗಿತ್ತು. ರಸ್ತೆ ತುಂಬಾ ಬೃಹತ್ ಗುಂಡಿಗಳು ಬಿದ್ದು, ಪ್ರತಿದಿನ ನೂರಾರು ವಾಹನ ಸವಾರರು ಮತ್ತು ಸಾರ್ವಜನಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿತ್ತು. ರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ಆಗ್ರಹಿಸಿ ಸ್ಥಳೀಯರು ಹಾಗೂ ವಾಹನ ಸವಾರರು ವಿವಿಧೆಡೆ ಫ್ಲೆಕ್ಸ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನದೆ ಕಣ್ಮುಚ್ಚಿ ಕುಳಿತಿದ್ದರು. ಸಾರ್ವಜನಿಕರ ಗೋಳು ಅಧಿಕಾರಿಗಳ ಕಿವಿಗೆ ಬಿದ್ದಿರಲಿಲ್ಲ. ಸಾರ್ವಜನಿಕರ ಈ ಪ್ರಮುಖ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ TV9 ಕನ್ನಡ ವಾಹಿನಿಯು ರಸ್ತೆಯ ದುಸ್ಥಿತಿಯ ಕುರಿತು ವಿಸ್ತೃತ ವರದಿಯನ್ನು ಪ್ರಸಾರ ಮಾಡಿತ್ತು. TV9 ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಬಿಎ (GBA) ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ಕೂಡಲೇ ಕಾರ್ಯಾಚರಣೆಗಿಳಿದರು. ಅಧಿಕಾರಿಗಳು ರಾತ್ರೋರಾತ್ರಿ ಜೆಸಿಬಿ ಹಾಗೂ ಡಾಂಬರು ಯಂತ್ರಗಳನ್ನು ಬಳಸಿ ರಾಜಕುಮಾರ್ ಸಮಾಧಿಯಿಂದ ಜಾಲಹಳ್ಳಿ ಕ್ರಾಸ್ ವರೆಗಿನ ರಸ್ತೆಯನ್ನು ಅತ್ಯಂತ ತುರ್ತಾಗಿ ದುರಸ್ತಿಗೊಳಿಸಿ ಡಾಂಬರೀಕರಣ ಮಾಡಿಕೊಟ್ಟಿದ್ದಾರೆ. ಹಲವು ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದ ತಮಗೆ ಕೇವಲ ಕೆಲವೇ ದಿನಗಳಲ್ಲಿ ನೆರವು ಕಲ್ಪಿಸಿಕೊಟ್ಟ TV9 ಸುದ್ದಿ ವಾಹಿನಿಗೆ ವಾಹನ ಸವಾರರು ಹಾಗೂ ಸ್ಥಳೀಯರು ಹೃತೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್ ಕುಮಾರ್​ ಆರ್​.
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More