ಮುಸ್ಲಿಮ್ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ಕ್ಲಾಸ್​ನಲ್ಲೇ ಅವಮಾನಿಸಿದ ಪ್ರೊಫೆಸರ್!

Edited By:

Updated on: Mar 28, 2026 | 1:07 PM

ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಕ್ಯಾಂಪಸ್‌ನಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು “ಭಯೋತ್ಪಾದಕ” ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ.

ಬೆಂಗಳೂರು, ಮಾರ್ಚ್​ 28:  ಬೆಂಗಳೂರಿನ ಪ್ರತಿಷ್ಠಿತ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕ್ಯಾಂಪಸ್‌ನಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ.

ಪಾಠದ ಮಧ್ಯದಲ್ಲಿ ಮಕ್ಕಳ ಗಲಾಟೆಯಿಂದಲೋ ಏನೋ ದೇಶಪಾಂಡೆ ಗರಂ ಆಗಿದ್ದು, ನೀವೆಲ್ಲಾ ಭಯೋತ್ಪಾದಕರು ಎಂದೆಲ್ಲಾ ನಿಂದಿಸಿದ್ದಾರೆ. ಇದೇ ವೇಳೆ ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು ತಮ್ಮ ಮೊಬೈಲ್​ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ಇದೇ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಈ ಬಗ್ಗೆ ದೂರು ದಾಖಲಿಸಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ವಿಶ್ವವಿದ್ಯಾಲಯ ಆಡಳಿತವು ತಕ್ಷಣ ಕ್ರಮ ಕೈಗೊಂಡು ಪ್ರೊಫೆಸರ್ ಅವರನ್ನು ಅಮಾನತು ಮಾಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 28, 2026 10:56 AM
Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More