ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಕುಂದಲಹಳ್ಳಿಯ ಸೆವೆನ್ ಹಿಲ್ಸ್ ಶ್ರೀ ಸಾಯಿ ಪಿಜಿಯಲ್ಲಿ ಸಂಜೆ 6 ಗಂಟೆಗೆ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಹೆಚ್ಎಎಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಪಿಜಿಗಳಲ್ಲಿನ ಸುರಕ್ಷತಾ ಲೋಪಗಳ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿದೆ.
ಬೆಂಗಳೂರು, ಡಿಸೆಂಬರ್ 29: ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಗರದ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ದುರ್ಘಟನೆ ನಡೆದಿದೆ. ಅರವಿಂದ್(23) ಮೃತ ಯುವಕ. ವೆಂಕಟೇಶ್ ಎಂಬುವವರು ಗಂಭೀರಗೊಂಡಿದ್ದು, ದೇವಿ, ವಿಶಾಲ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್ಎಎಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.